Breaking News

ಕುಂದಗೋಳದಲ್ಲಿ ಹೆಚ್ಚಾದ ಹುಚ್ಚ ನಾಯಿ ಕಡಿತ

ಕುಂದಗೋಳ : ತಾಲೂಕಿನ ಸಂಶಿ ಗ್ರಾಮದಲ್ಲಿ ಹುಚ್ಚು ನಾಯಿ ಹಾವಳಿ ಅತಿಯಾಗಿದೆ, ಈಗಾಗಲೇ 18ಕ್ಕೂ ಅಧಿಕ ಜನರಿಗೆ ನಾಯಿ ಕಚ್ಚಿದ ಪರಿಣಾಮ ಕುಂದಗೋಳ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಪ್ರಯಾಣ ಬೆಳೆಸಿದ್ದಾರೆ.

ನಿನ್ನೆ ಭಾನುವಾರದಿಂದ ನಾಯಿ ಹಾವಳಿ ಅತಿಯಾಗಿದ್ದು, ಸ್ವತಃ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ನಾಯಿ ಬಂಧಿಸಿಲು ಹರಸಾಹಸ ಪಟ್ಟು ವಿಫಲರಾಗಿದ್ದಾರೆ.

ಈಗಾಗಲೇ ಗ್ರಾಮದಲ್ಲಿ ಡಂಗೂರ ಸಾರಿ ಸಂಶಿ ಜನರಿಗೆ ಹುಚ್ಚು ನಾಯಿ ಹಾವಳಿ ಬಗ್ಗೆ ಮಾಹಿತಿ ತಿಳಿಸಿದ ಗ್ರಾಮ ಪಂಚಾಯಿತಿ ಮಕ್ಕಳು, ವೃದ್ಧರು, ಅಂಗವಿಕಲರು ಎಚ್ಚರ ವಹಿಸುವಂತೆ ಸಲಹೆ ನೀಡಿ ನಾಯಿ ಕಚ್ಚಿದ 18 ಜನರನ್ನೂ ಆಸ್ಪತ್ರೆಗೆ ಕಳುಹಿಸುವ ವ್ಯವಸ್ಥೆ ಮಾಡಿದ್ದಾರೆ.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *