Breaking News

ಸಿದ್ದರಾಮಯ್ಯನವರೆ ಸಿಎಂ ಆಗಿ ಮುಂದುವರೆಯುತ್ತಾರೆ: ಸಚಿವ ಸತೀಶ ಜಾರಕಿಹೊಳಿ

ಮೈಸೂರು: ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆ, ಸಿ.ಎಂ. ಬದಲಾವಣೆ ಪ್ರಶ್ನೆಯೇ ಉದ್ಭವಿಸಿಲ್ಲ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು‌.
ನಗರದಲ್ಲಿ ಮಂಗಳವಾರ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.‌ ಮಹದೇವಪ್ಪ ಅವರನ್ನು ಭೇಟಿ ಮಾಡಿದ ಸಂದರ್ಭ ಪತ್ರಕರ್ತರ ಜೊತೆ ಅವರು ಮಾತನಾಡಿದರು.
ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿ ಆಗಿ ಇರುತ್ತಾರೋ, 3 ವರ್ಷ ಇರುತ್ತಾರೋ ಎನ್ನುವುದನ್ನು ಪಕ್ಷದ ಹೈಕಮಾಂಡ್ ನಲ್ಲಿ ಕೇಳಬೇಕು. ಸದ್ಯಕ್ಕಂತೂ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದರು.
ಬೆಂಬಲಿಗರು ತಮ್ಮ ನಾಯಕರ ಪರ ಘೋಷಣೆ ಕೂಗುವುದು ಸಾಮಾನ್ಯ ಅದನ್ನೇ ಇಟ್ಟುಕೊಂಡು ಏನೋ ಬದಲಾವಣೆ ಆಗುತ್ತದೆ ಎಂದು ಹೇಳುವುದು ಸರಿಯಲ್ಲ. ವಿಪಕ್ಷಗಳೂ ಪ್ರೀತಿಯಿಂದ ನನ್ನ ಹೆಸರು ಹೇಳುತ್ತಿರಬಹುದು. ಆದರೆ ಪಕ್ಷದಲ್ಲಿ ಆ ರೀತಿಯ ಯಾವ ಬೆಳವಣಿಗೆಯೂ ಆಗಿಲ್ಲ ಎಂದರು.
ಮಹದೇವಪ್ಪ ಜೊತೆ ಮಾತುಕತೆ ಕುರಿತು ಪ್ರತಿಕ್ರಿಯಿಸಿ ರಾಜಕಾರಣಿಗಳು ಸೇರಿದ ಮೇಲೆ ರಾಜಕಾರಣದ ಚರ್ಚೆ ಸಾಮಾನ್ಯ, ಇವತ್ತಿನ ಭೇಟಿಯಲ್ಲಿ ಮಹತ್ವದ ವಿಚಾರವೇನೂ ಇಲ್ಲ. ಇಡೀ ದಿ‌ನ ಮೈಸೂರಿನಲ್ಲಿ ಇದ್ದು ದಸರಾ ನೋಡುತ್ತೇನೆ ಅಷ್ಟೇ ಎಂದರು.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *