Breaking News

ಹರಿಯಾಣ ವಿಧಾನಸಭಾ ಚುನಾವಣೆ: ಕುಸ್ತಿಪಟು ವಿನೇಶ್ ಫೋಗಟ್ ಗೆ ಗೆಲುವು

ಹರಿಯಾಣ: ಇಂದು (ಅಕ್ಟೋಬರ್ 08) ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಇನ್ನು ಜುಲಾನ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಚುನಾವಣೆ ಆಯೋಗದ ಪ್ರಕಾರ, ಪ್ರಕಾರ 11 ಸುತ್ತಿನ ಮತ ಎಣಿಕೆಯ ಬಳಿಕ ಜೂಲಾನಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್ ಕ್ಷೇತ್ರದಿಂದ 50,617 ಮತಗಳನ್ನು ಪಡೆಯುವ ಮೂಲಕ 6,050 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಹರಿಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಇಂದು (ಅಕ್ಟೋಬರ್ 08) ಮತ ಎಣಿಕೆ ನಡೆದಿದೆ. ಇನ್ನೂ ಇಲ್ಲಿನ ಜುಲಾನ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನೇಶ್ ಫೋಗಟ್ ಗೆಲುವು ಸಾಧಿಸುವ ಮೂಲಕ ಕಮಲವನ್ನು ಮುದುಡಿ ಇಟ್ಟಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *