ಬೆಂಗಳೂರು: ಕೆಎಸ್‌ಆರ್ಟಿಸಿಯ ಐರಾವತ ಕ್ಲಬ್ ಕ್ಲಾಸ್ 2.0 ಮಾದರಿಯ 20 ಬಸ್‌ಗಳನ್ನು ಈ ತಿಂಗಳ ಕೊನೆಯಲ್ಲಿ ಸಮೂಹಕ್ಕೆ ಸೇರ್ಪಡೆಗೊಳಿಸಲಿದೆ. 2.0 ಐರಾವತ್ ಕ್ಲಬ್ ಕ್ಲಾಸ್ ಬಸ್ಗಳಲ್ಲಿ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದೆ.
ಶಕ್ತಿಶಾಲಿ ಹ್ಯಾಲೊಜಿನ್ ಹೆಡ್ಲೈಟ್ಗಳು ಮತ್ತು ಡೇ ರನ್ನಿಂಗ್ ಲೈಟ್ಗಳೊಂದಿಗೆ ಹೊಸ ಪ್ಲಶ್ ಇಂಟೀರಿಯರ್ಸ್ ಮತ್ತು ಬಾಹ್ಯ ಸ್ಕ್ಯಾಂಡಿ ನೇವಿಯನ್ ವಿನ್ಯಾಸ ಹೊಂದಿರುವ ಐಷಾರಾಮಿ ಬಸ್ ಇದಾಗಿದೆ.
ಹೊಸಕೋಟೆ ಬಳಿ ಇರುವ ವೋಲ್ವೋ ಬಸ್ ತಯಾರಕ ಕಾರ್ಖಾನೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮತ್ತು ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ (ವಾಸು) ಭೇಟಿ ನೀಡಿ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ಬಸ್ಗಳನ್ನು ಪರಿಶೀಲಿಸಿದರು.
ಈ ವೇಳೆ ಮಾತನಾಡಿದ ಸಚಿವರು, ಈ ತಿಂಗಳ ಅಂತ್ಯದಲ್ಲಿ ಹೊಸ ಮಾದರಿಯ ಪ್ರಯಾಣಿಕ ಸ್ನೇಹಿ ಐರಾವತ ಕ್ಲಬ್ಕ್ಲಾಸ್ ಬಸ್ಗಳು ಸಂಸ್ಥೆಗೆ ಸೇರ್ಪಡೆಗೊಳ್ಳಲಿವೆ. ಒಂದು ಬಸ್ನ ದರ 1.78 ಕೋಟಿ ರೂ. ಆಗಿದ್ದು, ನಿಗಮದಲ್ಲಿ ಒಟ್ಟು 443 ಐಷಾರಾಮಿ ಬಸ್ಗಳಿವೆ. ನೂತನ ವಿನ್ಯಾಸದೊಂದಿಗೆ ಮತ್ತಷ್ಟು ಸುಧಾರಿತ ತಂತ್ರಜ್ಞಾನ ಅಳವಡಿಕೆಯೊಂದಿಗೆ ಪ್ರಯಾಣಿಕರಿಗೆ ಮತ್ತಷ್ಟು ಉತ್ತಮ ಸೇವೆ ನೀಡಲಾಗುವುದು ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

