Breaking News

ದಸರಾಕ್ಕೆ ರಜೆ ಘೋಷಣೆ ಮಾಡದ ಶಾಲೆಗೆ ಮುತಾಲಿಕ್ ಭೇಟಿ

ಧಾರವಾಡ: ನಾಡ ಹಬ್ಬ ದಸರಾಕ್ಕೆ ಸರ್ಕಾರವೇ 15 ದಿನಗಳ ಕಾಲ ಶಾಲೆಗೆ ಅಧಿಕೃತ ರಜೆ ಘೋಷಣೆ ಮಾಡಿದೆ. ಆದರೆ, ಕೆಲ ಕ್ರಿಶ್ಚಿಯನ್ ಶಾಲೆಗಳು ಸರ್ಕಾರದ ಆದೇಶವನ್ನು ಮೀರಿ ಶಾಲೆಗಳನ್ನು ನಡೆಸುತ್ತಿವೆ ಎಂದು ಶ್ರೀರಾಮ ಸೇನೆ ಕಾರ್ಯಕರ್ತರು ಹಾಗೂ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಅವರು ಧಾರವಾಡದ ಬಾಸೆಲ್ ಮಿಶನ್ ಶಾಲೆಗೆ ತೆರಳಿ ಶಾಲೆಯ ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸಿದರು.

ನಾಡಹಬ್ಬ ದಸರಾಕ್ಕೆ ರಜೆ ಘೋಷಣೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಕ್ರಿಶ್ಚಿಯನ್ ಶಾಲೆಗಳು ಪರೀಕ್ಷೆ ನಡೆಸುವ ಮೂಲಕ ಚರ್ಚೆಗೆ ಗ್ರಾಸವಾಗಿವೆ. ಹಿಂದೂ ಸಂಪ್ರದಾಯ, ಸಂಸ್ಕೃತಿಗೆ ಈ ಕ್ರಿಶ್ಚಿಯನ್ ಶಾಲೆಗಳು ಅಪಮಾನ ಮಾಡುತ್ತಿವೆ. ಸರ್ಕಾರದ ಆಜ್ಞೆಯನ್ನು ಈ ಶಾಲೆಗಳು ಉಲ್ಲಂಘನೆ ಮಾಡುತ್ತಿವೆ ಎಂದು ರಜೆ ಸಂದರ್ಭದಲ್ಲೂ ಪರೀಕ್ಷೆ ನಡೆಸಿದ ಕ್ರಿಶ್ಚಿಯನ್ ಶಾಲೆಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದರು.

ನಾಡಹಬ್ಬಕ್ಕೆ ರಜೆ ಘೋಷಣೆ ಮಾಡಲಾಗಿದೆ. ನಾಳೆಯಿಂದ ಶಾಲೆಗಳಿಗೆ ರಜೆ ಘೋಷಣೆ ಮಾಡಬೇಕು. ಇಲ್ಲದೇ ಹೋದರೆ ನಾವೇ ಬಂದು ಶಾಲೆಯನ್ನು ಬಂದ್‌ ಮಾಡಬೇಕಾಗುತ್ತದೆ ಎಂದು ಶ್ರೀರಾಮ ಸೇನೆ ಕಾರ್ಯಕರ್ತರು ಶಾಲಾ ಸಿಬ್ಬಂದಿಗೆ ಎಚ್ಚರಿಕೆ ನೀಡಿದರು. ಇದಕ್ಕೆ ಒಪ್ಪಿದ ಶಾಲಾ ಆಡಳಿತ ಮಂಡಳಿ ನಾಳೆಯಿಂದ ರಜೆ ಘೋಷಣೆ ಮಾಡುವದಾಗಿ ಒಸಿ ಕೊಂಡರು.

Share News

About Shaikh BigTv

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *