ಹುಬ್ಬಳ್ಳಿ: ಎಕ್ಸಿಟ್ ಪೋಲ್ ಬಗ್ಗೆ ನನಗೆ ಯಾವುದೇ ನಂಬಿಕೆ ಇಲ್ಲ.ಕರ್ನಾಟಕದಲ್ಲೂ ಎಕ್ಸಿಟ್ ಪೋಲ್ ಸುಳ್ಳಾಗಿತ್ತು ಎಂದು ಡಿಸಿಎಂ ಡಿ.ಕೆ.ಶಿವಕುಮಾರ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು,ಹರಿಯಾಣ ಜಮ್ಮು ಕಾಶ್ಮೀರ ಚುನಾವಣೆ ಫಲಿತಾಂಶ ವಿಚಾರಕ್ಕೆ ಪ್ರತಿಕ್ರಿಯಿಸಿ,ಹರಿಯಾಣದಲ್ಲಿ ಯಾಕೆ ಹಿನ್ನಡೆಯಾಗಿದೆ ಪಕ್ಷದ ಒಳಗೆ ಚರ್ಚೆಯಾಗುತ್ತೆ
ಹರಿಯಾಣ ದಿಲ್ಲಿಗೆ ಹತ್ತಿರವಿರುವ ರಾಜ್ಯ. ರಾಜಕೀಯವಾಗಿ ಸಾಕಷ್ಟು ಮಹತ್ವ ಇದೆ.ಅಧಿಕಾರಕ್ಕೆ ಬರುವ ನಿರೀಕ್ಷೆ ಇತ್ತು, ಆದ್ರೆ ಹುಸಿಯಾಗಿದೆ. ಜಮ್ಮುಕಾಶ್ಮೀರಲ್ಲಿ ಇಂಡಿಯಾ ಒಕ್ಕೂಟಕ್ಕೆ ಗೆಲುವಾಗಿದೆಬಹಳ ದಿನದ ನಂತರ ಚುನಾವಣೆ ನಡೆದಿತ್ತು ನಮಗೆ ಗೆಲುವಾಗಿದೆ..ಮುಂದಿನ ಮುಖ್ಯಮಂತ್ರಿ ವಿಚಾರದಲ್ಲಿ ಯಾವುದೇ ಚರ್ಚೆ ಇಲ್ಲ.ಯಾವುದೇ ಲಾಭಿ ಇಲ್ಲ, ಯಾವುದೇ ಘೋಷಣೆ ಇಲ್ಲ. ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಕೈ ಕೆಳಗೆ ನಾವು ಕೆಲಸ ಮಾಡುತ್ತಿದ್ದೇವೆ ತಾವು ಮುಖ್ಯಮಂತ್ರಿ ಆಗುವ ಅವಕಾಶ ಇದೇನಾ ಎಂಬ ಪ್ರಶ್ನೆಗೆ ಸಿದ್ದರಾಮಯ್ಯ ಇದಾರಲ್ಲರೀ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

