Breaking News

ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಪೂರ್ವಭಾವಿ ಸಭೆ

ಬೆಳಗಾವಿ: ನಗರದಲ್ಲಿ ನವೆಂಬರ್‌ 1ರಂದು ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ತೀರ್ಮಾನವನ್ನು ಇಲ್ಲಿ ಮಂಗಳವಾರ ನಡೆದ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಕೈಗೊಳ್ಳಲಾಯಿತು.
ಈ ಬಾರಿ ದೀಪಾವಳಿ ಹಬ್ಬವೂ ನ.1ರಂದೇ ಇದೆ ಅಂದು ಸಾಂಕೇತಿಕವಾಗಿ ಕಾರ್ಯಕ್ರಮ ನಡೆಸಿ, ನ.3ರಂದು ಮೆರವಣಿಗೆ ಆಯೋಜಿಸಬೇಕು ಎಂದು ಯುವಕ ಸಂಘಟನೆಗಳ ಮುಖಂಡರು ಒತ್ತಾಯಿಸಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕನ್ನಡ ಹೋರಾಟಗಾರರಾದ ಅಶೋಕ ಚಂದರಗಿ, ರಮೇಶ ಸೊಂಟಕ್ಕಿ ಮತ್ತಿತರರು, ಯಾವ ಕಾರಣಕ್ಕೂ ರಾಜ್ಯೋತ್ಸವದ ಮೆರವಣಿಗೆ ದಿನಾಂಕ ಮುಂದೂಡುವಂತಿಲ್ಲ. ಬೇಕಿದ್ದರೆ ಮೆರವಣಿಗೆ ಸಮಯ ವಿಸ್ತರಿಸಿ ಎಂದರು. ಈ ವಿಚಾರವಾಗಿ ಸಮಗ್ರವಾಗಿ ಚರ್ಚಿಸಿದ ನಂತರ, ನ.1ರಂದೇ ರಾಜ್ಯೋತ್ಸವದ ಭವ್ಯ ಮೆರವಣಿಗೆಯನ್ನೂ ನಡೆಸುವ ನಿರ್ಧಾರವನ್ನು ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ‍ಪ್ರಕಟಿಸಿದರು.
ದೀಪಾವಳಿ ಮತ್ತು ರಾಜ್ಯೋತ್ಸವ ಜತೆಯಾಗಿ ಬಂದಿದ್ದರಿಂದ ಅದ್ದೂರಿಯಾಗಿ ಮೆರವಣಿಗೆ ನಡೆಸಲಾಗುವುದು. ವೀಕ್ಷಣೆಗಾಗಿ ಮಹಿಳೆಯರಿಗಾಗಿ ಪ್ರತ್ಯೇಕ ಗ್ಯಾಲರಿ ಮಾಡಲಾಗುವುದು. ಬೆಳಗಾವಿಯನ್ನು ಕರ್ನಾಟಕದಲ್ಲೇ ಉಳಿಸಿಕೊಳ್ಳಲು ಹೋರಾಡಿದ ಮಹನೀಯರ ಭಾವಚಿತ್ರಗಳನ್ನು ಪ್ರದರ್ಶಿಸಲಾಗುವುದು ಎಂದರು.
ಹೋರಾಟಗಾರರು ಮತ್ತು ಪತ್ರಕರ್ತರನ್ನು ಸನ್ಮಾನಿಸಲಾಗುವುದು. ಸಾಧಕರ ಆಯ್ಕೆಗಾಗಿ ಜಿಲ್ಲಾ ಪಂಚಾಯ್ತಿ ಸಿಇಒ ಅಧ್ಯಕ್ಷತೆಯಲ್ಲಿ ಪ್ರತ್ಯೇಕ ಸಮಿತಿ ರಚಿಸಲಾಗುವುದು. ಉತ್ತಮ ರೂಪಕಕ್ಕೆ ಪ್ರಶಸ್ತಿ ನೀಡಲಾಗುವುದು ಹೆಲಿಕ್ಯಾಪ್ಟರ್‌ನಿಂದ ಚನ್ನಮ್ಮನ ಪ್ರತಿಮೆಗೆ ಪುಷ್ಪವೃಷ್ಟಿ ಮಾಡಲು ಯತ್ನಿಸಲಾಗುವುದು ಎಂದು ತಿಳಿಸಿದರು.

Share News

About BigTv News

Check Also

ದೀಪಾವಳಿ ಹಬ್ಬದ ದಿನವೇ ಕುಟುಂಬಸ್ಥರು ಕಣ್ಣೀರು! ಅಡ್ಡಾದಿಡ್ಡಿ ಕಾರು ಚಲಾಯಿಸಿ ಬೈಕ್​ ಸವಾರನ ಪ್ರಾಣ ತೆಗೆದ ಮಹಿಳೆ ಪರಾರಿ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಹಿಳೆಯೊಬ್ಬರು ವೇಗವಾಗಿ ಚಲಾಯಿಸುತ್ತಿದ್ದ ಮಹೀಂದ್ರಾ ಥಾರ್ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 55 ವರ್ಷದ …

Leave a Reply

Your email address will not be published. Required fields are marked *