Breaking News

ನವಲಿ ಅಣೆಕಟ್ಟು ನಿರ್ಮಾಣ ಕುರಿತು ಆಂಧ್ರ, ತೆಲಂಗಾಣ ಸಿಎಂ ಜೊತೆ ಚರ್ಚೆ: ಡಿಸಿಎಂ ಡಿಕೆಶಿ

ರಾಯಚೂರು : ಶಿವಮೊಗ್ಗ ಜಿಲ್ಲೆ ಬಳಿಯ ನವಲಿ ಎಂಬಲ್ಲಿ ಅಣೆಕಟ್ಟು ನಿರ್ಮಾಣ ಸಂಬಂಧ ಒಂದು ತಿಂಗಳ ಒಳಗಾಗಿ ಕರ್ನಾಟಕ, ಆಂಧ್ರ ಹಾಗೂ ತೆಲಂಗಾಣದ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಜಿಲ್ಲೆಯ ಸಿಂಧನೂರಿನಲ್ಲಿ ಆಯೋಜಿಸಿದ್ದ ರೈತ ದಸರಾ ಉದ್ಘಾಟಿಸಿ ಮಾತನಾಡಿದ ಅವರು, ತುಂಗಾಭದ್ರ ಅಣೆಕಟ್ಟಿಗೆ ಪರ್ಯಾಯವಾಗಿ ನವಲಿಯಲ್ಲಿ ಅಣೆಕಟ್ಟು ನಿರ್ಮಿಸಬೇಕೆಂದು ಒತ್ತಾಯವಿದೆ.
ಅಲ್ಲದೆ, 33 ಟಿಎಂಸಿ ನೀರು ವ್ಯರ್ಥವಾಗುತ್ತಿವೆ ಎಂದು ಮಾಹಿತಿ ನೀಡಿದ್ದಾರೆ. ಹೀಗಾಗಿ ಈ ಯೋಜನೆ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ತಜ್ಞರ ಸಮಿತಿಯು ಅಣೆಕಟ್ಟಿನ ಗೇಟ್‍ಗಳ ಬದಲಾವಣೆ ಮಾಡಬೇಕೆಂದು ವರದಿ ನೀಡಿದೆ. ಈ ಬಗ್ಗೆ ಸಿಎಂ, ಜಿಲ್ಲಾ ಮಂತ್ರಿಗಳು, ಸಂಸದರು, ಶಾಸಕರ ಜತೆ ಚರ್ಚೆ ಮಾಡಿದ್ದು, ಮುಂದಿನ ದಿನಗಳಲ್ಲಿ ಈ ಎಲ್ಲ ಗೇಟ್‍ಗಳನ್ನು ಪರಿಶೀಲನೆ ಮಾಡಿ, ಅಣೆಕಟ್ಟಿನಲ್ಲಿ ನೀರಿನ ಪ್ರಮಾಣ ಕಡಿಮೆಯಾದ ಬಳಿಕ ಗೇಟ್‍ಗಳನ್ನು ಬದಲಾವಣೆ ಮಾಡುತ್ತೇವೆ. ಆ ಮೂಲಕ ಈ ಅಣೆಕಟ್ಟು, ರೈತರ ಬದುಕು ಉಳಿಸಲು ಸರಕಾರ ಕ್ರಮ ವಹಿಸಲಿದೆ ಎಂದರು.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *