Breaking News

ರಾಜ್ಯದಲ್ಲಿ ಎಡಿಎಲ್ಆರ್, ಗ್ರಾಮ ಲೆಕ್ಕಿಗರು, ಸರ್ವೇಯರ್ ಹುದ್ದೆಗಳ ನೇಮಕಾತಿ: ಸಚಿವ ಕೃಷ್ಣ ಬೈರೇಗೌಡ

ಕಾರವಾರ: ರಾಜ್ಯದಲ್ಲಿ 34 ಸರ್ವೆ ಎಡಿಎಲ್‌ಆರ್ ಹುದ್ದೆಗಳ ಭರ್ತಿಗೆ ಚಾಲನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 364 ಸರ್ವೆಯರ್ ಹುದ್ದೆಗಳು ಖಾಲಿ ಇದ್ದು, ನೇಮಕಾತಿಗೆ ಮುಖ್ಯಮಂತ್ರಿಗಳು ಅನುಮತಿ ನೀಡಿದ್ದಾರೆ.
ಸರ್ವೆಯರ್ ಹುದ್ದೆಗಳ ನೇಮಕಾತಿ ಕೂಡ ಜಾರಿಯಲ್ಲಿದೆ ಎಂದು ತಿಳಿಸಿದ್ದಾರೆ.
1091 ಲೈಸೆನ್ಸ್ ಸರ್ವೆಯರ್ ಗಳ ನೇಮಕ ಮಾಡಲಾಗಿದೆ ಗ್ರಾಮ ಆಡಳಿತಾಧಿಕಾರಿ ಹುದ್ದೆ ಖಾಲಿ ಇವೆ. ಒಂದು ಸಾವಿರ ಗ್ರಾಮ ಲೆಕ್ಕಗರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ತಹಶೀಲ್ದಾರ್ ಕೋರ್ಟ್ ಗಳಲ್ಲಿ ಬಾಕಿ ಉಳಿದ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಕ್ರಮ ವಹಿಸಲಾಗಿದೆ. ಈ ಹಿಂದೆ 212 ದಿನಗಳಲ್ಲಿ ವಿಲೇವಾರಿಯಾಗುತ್ತಿದ್ದ ಪ್ರಕರಣಗಳು ಈಗ 76 ದಿನಗಳಲ್ಲಿ ವಿಲೇವಾರಿ ಆಗುತ್ತಿವೆ ಎಂದು ತಿಳಿಸಿದ್ದಾರೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *