ಬೆಂಗಳೂರು: ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಈರುಳ್ಳಿ ದರ 80 ರೂಪಾಯಿ ಗಡಿ ದಾಟಿದೆ. ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬಂದರೂ ಬೆಲೆ ಏರುಗತಿಯಲ್ಲಿ ಸಾಗುತ್ತಿದ್ದು, ಮತ್ತಷ್ಟು ದರ ಹೆಚ್ಚಳ ಆತಂಕ ಎದುರಾಗಿದೆ.
ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜಿ ಈರುಳ್ಳಿ ದರ 75 ರಿಂದ 80 ರೂಪಾಯಿಗೆ ಮಾರಾಟವಾಗಿದೆ.
ಮಹಾರಾಷ್ಟ್ರದಿಂದ 500ಕ್ಕೂ ಅಧಿಕ ಲಾರಿಗಳು ಸೇರಿ ಸುಮಾರು 980 ಲಾರಿಗಳು ಬೆಂಗಳೂರಿಗೆ ಬಂದಿವೆ. ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಗೆ 95,783, ದಾಸನಪುರ ಮಾರುಕಟ್ಟೆಗೆ 4427 ಚೀಲ ಈರುಳ್ಳಿ ಬಂದಿದೆ.
ಸಗಟು ಮಾರುಕಟ್ಟೆಯಲ್ಲಿ ಹಳೆ ಈರುಳ್ಳಿ ಕ್ವಿಂಟಲ್ ಗೆ 5200 ರೂ. ವರೆಗೆ ಗರಿಷ್ಠ ದರಕ್ಕೆ ಹರಾಜಾಗಿದೆ. ಉತ್ತಮ ಗುಣಮಟ್ಟದ ಹೊಸ ಈರುಳ್ಳಿ 4,000 ರೂ.ವರೆಗೂ ಮಾರಾಟವಾಗಿದೆ. ಮಳೆಯಿಂದ ಈರುಳ್ಳಿ ಬೆಳೆ ಹಾಳಾಗಿರುವುದರಿಂದ ಪೂರೈಕೆಯಲ್ಲಿ ವ್ಯಕ್ತಿಯವಾಗಿದ್ದು, ಈರುಳ್ಳಿ ದರ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

