ಕೊಪ್ಪಳ: ಮದ್ಯಪಾನ ಮುಕ್ತ ಮತ್ತು ಶುಚಿತ್ವ ಹೊಂದಿದ ಗ್ರಾಮ ಎಂದು ಇತ್ತೀಚೆಗೆ ಸುದ್ದಿಯಲ್ಲಿರುವ ಲೇಬಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಮನೂರ ಗ್ರಾಮವು ಜಿಲ್ಲಾ ಪಂಚಾಯಿತಿ ದತ್ತು ಗ್ರಾಮವೆಂದು ಆಯ್ಕೆಯಾಗಿದೆ.
ಬೆಟಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೋರನಾಳ ಗ್ರಾಮವನ್ನೂ ಆಯ್ಕೆ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಅರಣ್ಯ ಇಲಾಖೆ, ರೇಷ್ಮೆ ಇಲಾಖೆಯಿಂದ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಅವಕಾಶ ಇರುವ ಕುರಿತು ಮಾಹಿತಿ ಪಡೆದರು. ಗ್ರಾಮಸ್ಥರು ತಮಗೆ ಅವಶ್ಯಕವಿರುವ ಕಾಮಗಾರಿ ಕುರಿತು ವಿವರಿಸಿದರು. ಎಲ್ಲಾ ತಾಂತ್ರಿಕ ಸಹಾಯಕರು ಪ್ರತಿ ಕಾಲೊನಿಗೆ ಭೇಟಿ ನೀಡಿ ಚರಂಡಿ, ರಸ್ತೆ, ಶಾಲಾಭಿವೃದ್ದಿ ಕಾಮಗಾರಿಗಳು ಅನುಷ್ಠಾನಗೊಳಿಸಲು ಸಂಪೂರ್ಣ ಮಾಹಿತಿ ಸಲ್ಲಿಸುವಂತೆ ಸೂಚಿಸಿದರು.
ಗ್ರಾಮಕ್ಕೆ ಅವಶ್ಯವಿರುವ ಕಾಮಗಾರಿಗಳನ್ನು ಮನರೇಗಾ ಯೋಜನೆ ಹಾಗೂ ವಿವಿಧ ಇಲಾಖೆಗಳ ಒಗ್ಗೂಡಿಸುವಿಕೆ ಮೂಲಕ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುವದು ಎಂದು ಸಭೆಯಲ್ಲಿ ಅಧಿಕಾರಿಗಳು ಗ್ರಾಮಸ್ಥರಿಗೆ ತಿಳಿಸಿದರು. ಗ್ರಾಮದಲ್ಲಿರುವ ಸಣ್ಣ, ಅತಿ ಸಣ್ಣ ರೈತರಿಗೆ ನರೇಗಾದಡಿ ಸಿಗುವ ಎಲ್ಲಾ ಸೌಲಭ್ಯಗಳನ್ನು ನೀಡಲಾಗುವದು. ಪ್ರತಿಯೊಬ್ಬರು ಯೋಜನೆಯ ಸದುಪಯೋಗ ಪಡೆಯಬೇಕು ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

