Breaking News

ಸಿಎಂ ರೇಸ್ ಕುರಿತು ಸ್ಪೋಟಕ್ ಮಾಹಿತಿ ಬಿಚಿಟ್ಟ ಬಿ.ವಾಯ್.ವಿಜಯೇಂದ್ರ

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಐದು ವರ್ಷ ಪೂರೈಸುತ್ತಾರೆ ಎಂದು ಯಾರು ಹೇಳಿಕೆ ಕೊಡುತ್ತಿದ್ದಾರೆ. ಅವರೇ ಸಿಎಂ ರೇಸ್ ನಲ್ಲಿ ಮುಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವಾಯ್.ವಿಜಯೇಂದ್ರ ಹೇಳಿದ್ದಾರೆ.

ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಶಾಸಕರೇ, ಸಚಿವರೇ ಸಿಎಂ ಅಧಿಕಾರಾವಧಿ ವಿಚಾರವಾಗಿ ಹೇಳಿಕೆ ಕೊಡುತ್ತಿದ್ದಾರೆ. ಮೇಲಾಗಿ ಸತೀಶ್ ಜಾರಕಿಹೊಳಿ ಸಿದ್ದರಾಮಯ್ಯ ಮೂರು ವರ್ಷ ಇರತ್ತಾರಾ? ಐದು ವರ್ಷ ಇರತ್ತಾರಾ? ಅದನ್ನು ಹೈಕಮಾಂಡ್ ಗೆ ಕೇಳಬೇಕು ಎಂದರು.

ಈಗಾಗಲೇ ಶಾಸಕರು ಗುಪ್ತ ಸಭೆಗಳನ್ನು ಮಾಡುತ್ತಿದ್ದಾರೆ. ಡಿಕೆಶಿ ದೇವರ ಪೂಜೆ ಮಾಡಿ ಬಳಿಕ ಸಿದ್ದರಾಮಯ್ಯ ಐದು ವರ್ಷ ಪೂರೈಸತ್ತಾರೆ ಎಂದು ಹೇಳತ್ತಾರೆ. ಆದರೆ ನಿಜವಾಗಿಯೂ ಸಿಎಂ ರೇಸ್ ನಲ್ಲಿ ಡಿಕೆಶಿ ಇದ್ದಾರೆ ಎಂದು ತಿಳಿಸಿದರು.

Share News

About Shaikh BigTv

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *