ನವದೆಹಲಿ: ದೆಹಲಿಯ ಸರೋಜಿನಿ ನಗರ ಪ್ರದೇಶದಲ್ಲಿನ ಒಳಚರಂಡಿ ಮಾರ್ಗದಲ್ಲಿ ವಿಷಕಾರಿ ಅನಿಲವನ್ನು ಸೇವಿಸಿದ ಕನಿಷ್ಠ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸರೋಜಿನಿ ನಗರದಲ್ಲಿನ ನಿರ್ಮಾಣ ಸ್ಥಳದಲ್ಲಿ ಒಳಚರಂಡಿ ತೊಟ್ಟಿಯೊಳಗೆ ವಿಷಕಾರಿ ಅನಿಲವನ್ನು ಉಸಿರಾಡಿದ ನಂತರ ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಕಾರ್ಮಿಕರು ತೊಟ್ಟಿಯೊಳಗೆ ಸ್ವಚ್ಛಗೊಳಿಸಲು ಹೋದಾಗ ಈ ಘಟನೆ ನಡೆದಿದೆ. ವಿಷಾನಿಲ ಸೇವಿಸಿ ಸಾವನ್ನಪ್ಪಿರುವ ಶಂಕೆ ಇದೆ ತೀವ್ರ ಅಸ್ವಸ್ಥ ಕಾರ್ಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

