Breaking News

ಹರಿಯಾಣ ವಿಧಾನಸಭಾ ಫಲಿತಾಂಶವು ಅನಿರೀಕ್ಷಿತ: ರಾಹುಲ್ ಗಾಂಧಿ

ನವದೆಹಲಿ: ಹರ್ಯಾಣದಲ್ಲಿ ಆಡಳಿತ ವಿರೋಧಿ ಅಲೆ ಸೃಷ್ಟಿಯಾಗಿ ಕಾಂಗ್ರೆಸ್‌ ಗೆಲ್ಲಬಹುದು ಎಂದಿದ್ದ ಸಮೀಕ್ಷೆಗಳೆಲ್ಲ ತಲೆಕೆಳಗಾಗಿ ಬಿಜೆಪಿ ಅಧಿಕಾರಕ್ಕೇರಲು ಸಜ್ಜಾಗಿರುವ ಹೊತ್ತಿನಲ್ಲೇ, ಇದು ಅನಿರೀಕ್ಷಿತ ಫಲಿತಾಂಶ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಕೇಳಿಬಂದ ದೂರುಗಳ (ಮತ ಎಣಿಕೆ/ಇವಿಎಂ ಕುರಿತ ದೂರು) ಬಗ್ಗೆ ಚುನಾವಣಾ ಆಯೋಗಕ್ಕೆ ತಿಳಿಸಲಿದ್ದೇವೆ ಎಂದಿದ್ದಾರೆ.
ಫಲಿತಾಂಶ ಘೋಷಣೆ ಬಳಿಕ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್‌ ಅನ್ನು ಬೆಂಬಲಿಸಿದ ಜಮ್ಮು ಕಾಶ್ಮೀರದ ಜನರಿಗೆ ಧನ್ಯವಾದ ತಿಳಿಸುತ್ತ, ಇಂಡಿಯಾ ಕೂಟದ ಗೆಲುವು ಸಂವಿಧಾನ ಮತ್ತು ಪ್ರಜಾಸತ್ತಾತ್ಮಕ ಸ್ವಾಭಿಮಾನದ ಗೆಲುವು ಎಂದರು.
ಆದರೆ ಹರ್ಯಾಣದ ಅನೇಕ ಕ್ಷೇತ್ರಗಳಿಂದ ನಮ್ಮ ಕಾರ್ಯಕರ್ತರು ದೂರು ನೀಡುತ್ತಿದ್ದಾರೆ. ಅವನ್ನು ನಾವು ಆಯೋಗದ ಗಮನಕ್ಕೆ ತರುತ್ತೇವೆ ಎಂದರು ಹಾಗೂ ಸಾಮಾಜಿಕ ನ್ಯಾಯಕ್ಕೆ ಹೋರಾಟ ಮುಂದುವರಿಯಲಿದೆ ಎಂದು ಘೋಷಿಸಿದರು.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *