ಧಾರವಾಡ: ಧಾರಾಕಾರ ಮಳೆಯಿಂದಾಗಿ ಹುಬ್ಬಳ್ಳಿ, ಧಾರವಾಡ ಬೈಪಾಸ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಆಗಿದೆ.
ಈ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಯರಿಕೊಪ್ಪ ಗ್ರಾಮದ ಬಳಿಯ ಮನಸೂರು ಹಳ್ಳಕ್ಕೆ ದೊಡ್ಡ ಪ್ರಮಾಣದ ನೀರು ಹರಿದು ಬರುತ್ತಿದೆ. ಈ ನೀರು ಕಾಮಗಾರಿ ನಡೆಯುತ್ತಿರುವ ರಸ್ತೆಯಲ್ಲೂ ಹರಿದು ಬರುತ್ತಿದ್ದು, ಇದರಿಂದ ವಾಹನಗಳು ಸಂಚಾರ ನಡೆಸದೇ ಸಾಲುಗಟ್ಟಿ ನಿಂತಿವೆ.
ನಿನ್ನೆ ರಾತ್ರಿಯಿಂದಲೇ ಈ ರಸ್ತೆಗೆ ದೊಡ್ಡ ಪ್ರಮಾಣದಲ್ಲಿ ನೀರು ಹರಿದು ಬಂದಿದ್ದರಿಂದ ರಸ್ತೆ ಸಂಚಾರ ನಿನ್ನೆ ರಾತ್ರಿಯಿಂದಲೇ ಬಂದ್ ಆಗಿದೆ. ಬೆಳಿಗ್ಗೆಯೂ ದೊಡ್ಡ ಪ್ರಮಾಣದಲ್ಲಿ ನೀರು ಹರಿದು ಬಂದಿದ್ದರಿಂದ ಸದ್ಯಕ್ಕೆ ರಸ್ತೆ ಸಂಚಾರ ಬಂದ್ ಆಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

