ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಹಿಪ್ಪರಗಿ ಬ್ಯಾರೇಜ್ ನ ಒಂದು ಗೇಟ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಗೇಟ್ ಮುಚ್ಚುವುದು ಸಾಧ್ಯವಾಗುತ್ತಿಲ್ಲ. ಇನ್ನು ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಬ್ಯಾರೇಜ್ ನಿಂದ 3 ಗೇಟ್ ಗಳ ಮೂಲಕ ನೀರು ಹೊರ ಹಾಕಲಾಗುತ್ತಿತ್ತು.
ಮೂರು ಗೇಟ್ ಬಂದ್ ಮಾಡುವ ಸಂದರ್ಭದಲ್ಲಿ 7 ನೇ ನಂಬರ್ ಗೇಟ್ ಬಂದ್ ಆಗಲಿಲ್ಲ. ಸದ್ಯ ಯುಕೆಪಿ ಎಂಜಿನಿಯರ್ ಗಳು ಪರಿಶೀಲನೆ ನಡೆಸಿದ್ದು, ತಾಂತ್ರಿಕ ಮಾಹಿತಿ ಪಡೆದು ಗೇಟ್ ಮುಚ್ಚಲು ಯತ್ನಿಸುತ್ತಿದ್ದಾರೆ.
ಬ್ಯಾರೇಜ್ ನಲ್ಲಿ 6 ಟಿಎಂಸಿ ನೀರು ಸಂಗ್ರಹವಿದ್ದು, ಸದ್ಯ ಒಂದು ಗೇಟ್ ಮೂಲಕ 15 ಸಾವಿರ ಕ್ಯುಸೆಕ್ ನೀರು ಹೊರ ಹೋಗುತ್ತಿದೆ. ಮಹಾರಾಷ್ಟ್ರ ದಿಂದ 12 ಸಾವಿರ ಕ್ಯುಸೆಕ್ ನೀರು ಹರಿದುಬರುತ್ತಿದೆ. ಇತ್ತ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಬ್ಯಾರೇಜ್ ಗೆ ಭೇಟಿ ನೀಡಿ ಗೇಟ್ ತಾಂತ್ರಿಕ ಸಮಸ್ಯೆ ಪರಿಹರಿಸಲು ಸೂಚಿಸಿದ್ದಾರೆ. ಸದ್ಯ ಎಲ್ಲ ನೀರು ಹರಿದು ಹೋಗುವ ಸಾಧ್ಯತೆಯಿಲ್ಲ, ಆತಂಕಪಡುವ ಅಗತ್ಯವಿಲ್ಲ ಎಂದು ಜಮಖಂಡಿ ಎಸಿ ಶ್ವೇತಾ ಬಿಡಿಕರ್ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

