Breaking News

ಮತ್ತೊಮ್ಮೆ ವೈಜ್ಞಾನಿಕವಾಗಿ ಜಾತಿಗಣತಿ ನಡೆಸಿ: ಕೇಂದ್ರ ಸಚಿವ ಸೋಮಣ್ಣ ಆಗ್ರಹ

ತುಮಕೂರು: ಅವೈಜ್ಞಾನಿಕವಾಗಿ ಸಿದ್ಧಪಡಿಸಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಗಣತಿ (ಜಾತಿ ಜನಗಣತಿ) ವರದಿಯನ್ನು ತಿರಸ್ಕರಿಸಿ ಮತ್ತೊಮ್ಮೆ ಗಣತಿ ನಡೆಸಬೇಕು ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಒತ್ತಾಯಿಸಿದರು.
ನಗರದ ತಮ್ಮ ಕಚೇರಿಯಲ್ಲಿ ಗುರುವಾರ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಜಾತಿ ಜನಗಣತಿಗೆ ಕಾಂಗ್ರೆಸ್‌ನಲ್ಲೇ ವಿರೋಧ ವ್ಯಕ್ತವಾಗಿದ್ದು, ಯಾವುದೇ ಜಾತಿ, ಸಮುದಾಯಕ್ಕೂ ಅನ್ಯಾಯವಾಗಬಾರದು. ಮತ್ತೊಮ್ಮೆ ವೈಜ್ಞಾನಿಕವಾಗಿ ಗಣತಿ ನಡೆಸಬೇಕು ಎಂದು ಆಗ್ರಹಿಸಿದರು.
ಜಾತಿ ಜನಗಣತಿ ವರದಿ ಸಿದ್ಧಪಡಿಸಲು ಈಗಾಗಲೇ ನೂರಾರು ಕೋಟಿ ಹಣ ವೆಚ್ಚ ಮಾಡಲಾಗಿದೆ. ಮತ್ತೊ‌ಮ್ಮೆ ಅಷ್ಟೊಂದು ಹಣ ನೀಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಯಾವುದಕ್ಕೂ ಇಂತಹ ನೂರಾರು ಕೋಟಿ ಹಣ ಖರ್ಚು ಮಾಡಿಲ್ಲವೇ ಎಂದು ಪ್ರಶ್ನಿಸಿದರು.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *