Breaking News

ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ

ಕುಂದಗೋಳ : ರಾತ್ರೋರಾತ್ರಿ ಗುಡೇನಕಟ್ಟಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಯಾರೋ ಸದ್ದಿಲ್ಲದೆ ಪ್ರತಿಷ್ಠಾಪನೆ ಮಾಡಿದ್ದು ಸಂಪೂರ್ಣ ಗ್ರಾಮವೇ ಗೊಂದಲಕ್ಕೆ ಸಿಲುಕಿದೆ.

ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ 5 ರಿಂದ 6 ಫೂಟ್ ಎತ್ತರದ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ.

ಆದರೆ, ಯಾರು ಈ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ ಎಂಬುದಕ್ಕೆ ಸೂಕ್ತ ಸ್ಪಷ್ಟನೆ ಸಿಕ್ಕಿಲ್ಲ, ಮಾರುತಿ ದೇವಸ್ಥಾನದ ಬಳಿಯಿರುವ ಸರ್ಕಲ್‌’ನಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ.

ಮುಖ್ಯವಾಗಿ ಸಿಸಿ ಕ್ಯಾಮೆರಾ ವ್ಯವಸ್ಥೆ ಸಹ ಇರದ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಸ್ಥಳದಲ್ಲಿ ಕುಂದಗೋಳ ಗ್ರಾಮೀಣ ಪೊಲೀಸರು ಉಪಸ್ಥಿತರಿದ್ದು ಪರಿಶೀಲನೆ ಕಾರ್ಯ ಕೈಗೊಂಡಿದ್ದಾರೆ.

Share News

About Shaikh BigTv

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *