Breaking News

ಮನೆಯ ಮುಂದೆ ದೊಡ್ಡ ಪ್ರಮಾಣದಲ್ಲಿ ನಿಂತ ನೀರು

ಧಾರವಾಡ: ಸಂಪಿಗೆನಗರ, ನೀಲ ಸಿಟಿ, ವ್ಯಾಸ ವಿಹಾರ ಲೇಔಟ್, ಶ್ರೀಶ್ ರೆಸಿಡೆನ್ಸಿ ಲೇಔಟ್‌ಗಳಲ್ಲಿ ವ್ಯಾಪಕವಾಗಿ ಮಳೆ ನೀರು ನುಗ್ಗಿದೆ. ಮನೆಯ ಮುಂದೆ ದೊಡ್ಡ ಪ್ರಮಾಣದಲ್ಲಿ ನೀರು ನಿಂತಿರುವುದರಿಂದ ಜನ ಹೊರಗಡೆ ಬರಲೂ ಆಗುತ್ತಿಲ್ಲ.

ನೀರಿನೊಂದಿಗೆ ಹಾವು, ಚೇಳುಗಳು ಸಹ ಬರುತ್ತಿದ್ದು, ಜನ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಸ್ಥಳಕ್ಕೆ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಭೇಟಿ ನೀಡಿ, ಪ್ರೋಣ್ ಕ್ಯಾಮೆರಾ ಮೂಲಕ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

ಈ ವೇಳೆ ಅಧಿಕಾರಿಗಳೊಂದಿಗೆ ಸ್ಥಳೀಯರು ವಾಗ್ವಾದ ಕೂಡ ನಡೆಸಿದರು. ರಾಜಕಾಲುವೆ ಇಲ್ಲದೇ ಇರುವುದಕ್ಕೆ ನೀರು ಲೇಔಟ್‌ಗಳಿಗೆ ನುಗ್ಗಿ ಜನರಿಗೆ ತೊಂದರೆಯುಂಟು ಮಾಡುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸುವಂತೆ ಅಲ್ಲಿನ ಜನ ಅಧಿಕಾರಿಗಳಿಗೆ ಒತ್ತಾಯಿಸಿದರು.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *