ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಅಕ್ಟೋಬರ್ 13 ರಂದು ಧಾರವಾಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಭಾನುವಾರ, ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿನ ಕಾರ್ಯಕ್ರಮ ಮುಗಿಸಿಕೊಂಡು, ಸಂಜೆ 4 ಗಂಟೆಗೆ ಧಾರವಾಡಕ್ಕೆ ಆಗಮಿಸಲಿದ್ದಾರೆ.
ಧಾರವಾಡದಲ್ಲಿರುವ ರೆಡ್ಡಿ ಸಹಕಾರ ಬ್ಯಾಂಕ್ ಶತಮಾನೋತ್ಸವ ಸಂಭ್ರಮ ಹಾಗೂ ಪ್ರಧಾನ ಕಚೇರಿ ನೂತನ ಕಟ್ಟಡದ ಉದ್ಘಾಟನೆ ಮತ್ತು ಎಫ್.ಟಿ.ನಲವಡಿ ಹಾಗೂ ಸಹಕಾರ ರಂಗದ ಭೀಷ್ಮ ಕೆ.ಎಚ್. ಪಾಟೀಲರ ಪುತ್ಥಳಿಗಳ ಅನಾವರಣ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.
ನಂತರ ಅವರು ಸತ್ತೂರಿನಲ್ಲಿರುವ ಡಿ. ವಿರೇಂದ್ರ ಹೆಗ್ಗಡೆ ಕಲಾ ಕ್ಷೇತ್ರದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ, ರಾತ್ರಿ 7 ಗಂಟೆಗೆ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಮುಖ್ಯಮಂತ್ರಿಗಳು ಪ್ರಯಾಣ ಬೆಳೆಸುವರೆಂದು ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

