ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಪ್ರಸ್ತಾವನೆಯ ಮೇರೆಗೆ ಸಿಕಂದರಾಬಾದ್ – ವಾಸ್ಕೋ ನಡುವೆ ಸಂಚರಿಸುವ ರೈಲು, ದಿನಾಂಕ 09/10/2024 ರಿಂದ ಬಳ್ಳಾರಿ, ಕೊಪ್ಪಳ, ಗದಗ, ಹುಬ್ಬಳ್ಳಿ, ಧಾರವಾಡ ಮಾರ್ಗವಾಗಿ ಸಂಚರಿಸುತ್ತಿದ್ದು, ವಾರದಲ್ಲಿ ಎರಡು ದಿನ ಸಂಚರಿಸುವ ಈ ರೈಲು ಪ್ರಯಾಣಿಕರಿಗೆ ಅತ್ಯಂತ ಪ್ರಯೋಜನಕಾರಿಯಾಗಲಿದೆ.
ಇದರ ಜೊತೆಗೆ ಬೆಳಗಾವಿ – ಮಣಗೂರು (ಭದ್ರಾಚಲಂ) ನಡುವೆ ರೈಲು ಸಂಚಾರ ಒದಗಿಸಬೇಕೆಂಬ ಸಚಿವರ ಮನವಿಯ ಮೇರೆಗೆ ದಿನಾಂಕ 16/10/2024 ರಿಂದ ರೈಲು ಸಂಚಾರ ಪ್ರಾರಂಭಿಸುವುದಾಗಿ ರೈಲ್ವೆ ಇಲಾಖೆ ಸೂಚಿಸಿದೆ. ಭದ್ರಾಚಲಂ ಪ್ರಮುಖ ತೀರ್ಥಕ್ಷೇತ್ರಗಳಲ್ಲಿ ಒಂದಾಗಿದ್ದು, ಈ ರೈಲು ವಾರದಲ್ಲಿ 4 ದಿನಗಳಲ್ಲಿ ಸಂಚರಿಸಲಿರುವುದರಿಂದ ಉತ್ತರ ಕರ್ನಾಟಕದ ಜನತೆಗೆ ಬಹಳ ಅನುಕೂಲಕರವಾಗಲಿದೆ.
ಪ್ರಸ್ತಾವನೆಗೆ ಸ್ಪಂದಿಸಿ ಈ ಎರಡೂ ರೈಲುಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟ ಪ್ರಧಾನಿ ಮೋದಿ ಅವರಿಗೆ ಹಾಗೂ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ, ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಮತ್ತು ರೈಲ್ವೆ ಸಚಿವಾಲಯದ ಅಧಿಕಾರಿ ವರ್ಗದವರಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಧನ್ಯವಾದ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

