ನವದೆಹಲಿ: ಕೇಂದ್ರ ಸರ್ಕಾರ ತನಗೆ ಸಂದಾಯವಾಗಿ ಜಿಎಸ್ಟಿ ತೆರಿಗೆಯಲ್ಲಿ 1,78,173 ಕೋಟಿ ರೂ ಮೊತ್ತವನ್ನು ವಿವಿಧ ರಾಜ್ಯಗಳಿಗೆ ಹಂಚಿಕೆ ಮಾಡಿದೆ. ಹಬ್ಬದ ಸೀಸನ್ ಇರುವುದರಿಂದ ಹಾಗೂ ರಾಜ್ಯ ಸರ್ಕಾರಗಳು ಅಭಿವೃದ್ಧಿ ಯೋಜನೆಗಳಿಗೆ ವೆಚ್ಚ ಮಾಡಲು ನೆರವಾಗಲು ಕೇಂದ್ರ ಸರ್ಕಾರ ಮುಂಗಡವಾಗಿ ಒಂದು ಕಂತನ್ನು ಹೆಚ್ಚುವರಿಯಾಗಿ ನೀಡಿದೆ. ಇದರಿಂದಾಗಿ ಈ ಬಾರಿ ರಾಜ್ಯಗಳಿಗೆ ಸಿಕ್ಕ ತೆರಿಗೆ ಪಾಲು ಎರಡು ಪಟ್ಟು ಹೆಚ್ಚಿದೆ. ತೆರಿಗೆ ಹಂಚಿಕೆಯಲ್ಲಿ ಉತ್ತರಪ್ರದೇಶಕ್ಕೆ ಸಿಂಹಪಾಲು ಮುಂದುವರಿದಿದೆ. 1.78 ಲಕ್ಷ ಕೋಟಿ ರೂ ಪೈಕಿ ಉತ್ತರಪ್ರದೇಶಕ್ಕೆ 31,962 ಕೋಟಿ ರೂ ಸಿಕ್ಕಿದೆ. ಮಹಾರಾಷ್ಟ್ರ ಬಿಟ್ಟರೆ ಅತಿಹೆಚ್ಚು ತೆರಿಗೆ ಸಂಗ್ರಹಿಸುವ ಕರ್ನಾಟಕವು ತೆರಿಗೆ ಹಂಚಿಕೆ ಪ್ರಮಾಣದಲ್ಲಿ 10ನೇ ಸ್ಥಾನದಲ್ಲಿದೆ. ತಮಿಳುನಾಡು, ಆಂಧ್ರಪ್ರದೇಶಗಳಿಗೆ ಕರ್ನಾಟಕಕ್ಕಿಂತಲೂ ಹೆಚ್ಚು ತೆರಿಗೆ ಹಂಚಿಕೆ ಆಗಿದೆ.
ಕೇಂದ್ರ ಸರ್ಕಾರ 2024-25ರ ಹಣಕಾಸು ವರ್ಷಕ್ಕೆ 12.20 ಲಕ್ಷ ಕೋಟಿ ರೂ ತೆರಿಗೆಯನ್ನು ರಾಜ್ಯಗಳಿಗೆ ಹಂಚಿಕೆ ಮಾಡಲು ನಿರ್ಧರಿಸಲಾಗಿದೆ. 89,086 ರೂಗಳ 14 ಕಂತುಗಳಲ್ಲಿ ಈ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡುತ್ತದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

