Breaking News

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಬೆಣ್ಣೆಹಳ್ಳ: ರಸ್ತೆ ಸಂಪರ್ಕ ಸ್ಥಗಿತ

ಗದಗ: ಧಾರವಾಡ ಹಾಗೂ ಗದಗ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಬೆಣ್ಣೆ ಹಳ್ಳ ಉಕ್ಕಿ ಹರಿಯುತ್ತಿದ್ದು ಗದಗ ಜಿಲ್ಲೆಯ ಹಲವೆಡೆ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ. ನರಗುಂದ ತಾಲೂಕಿನ ಕುರ್ಲಗೇರಿ ಗ್ರಾಮದ ಬಳಿ ಸೇತುವೆ ಜಲಾವೃತವಾಗಿದ್ದು ಗದಗ-ಶಲವಡಿ- ನರಗುಂದ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ.
ರೋಣ ತಾಲೂಕಿನ ಯಾವಗಲ್ ಗ್ರಾಮದ ಬಳಿ ಸೇತುವೆ ಜಲಾವೃತಗೊಂಡಿದ್ದು ರೋಣ ಹಾಗೂ ನರಗುಂದ ರಸ್ತೆ ಸಂಪರ್ಕ ಸ್ಥಗಿತಗೊಂಡು ವಾಹನ ಸವಾರರು ಪರದಾಡುತ್ತಿದ್ದಾರೆ. ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಬೆಣ್ಣೆ ಹಳ್ಳದ ಬಳಿ ತೆರಳದಂತೆ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಧ್ವನಿವರ್ಧಕದ ಜಿಲ್ಲಾಡಳಿತ ಎಚ್ಚರಿಕೆ ನೀಡುತ್ತಿದೆ. ಬೆಣ್ಣೆ ಹಳ್ಳದ ಸುತ್ತಮುತ್ತಲಿನ ಜಮೀನುಗಳು ಜಲಾವೃತಗೊಂಡು ರೈತರು ಬೆಳೆದ ಗೋವಿನಜೋಳ, ಹತ್ತಿ, ಈರುಳ್ಳಿ ಬೆಳೆಗಳು ನಾಶವಾಗಿದ್ದು ರೈತರು ಕಂಗಾಲಾಗಿದ್ದಾರೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *