ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಕೇಸ್ ನ ಆರೋಪಿಗಳು ಅಮಾಯಕರು ಅಂತ ಜಮೀರ್ ಅಹ್ಮದ್ ಪತ್ರ ಬರೆದಿದ್ದರು. ಕಾಂಗ್ರೆಸ್ ಪಕ್ಷ ಭಯೋತ್ಪಾದಕ ಬೆಂಬಲಿಗ ಪಕ್ಷ. ಕಾಂಗ್ರೆಸ್ ನವರಿಗೆ ಮತಾಂಧತೆಯ ಪಿತ್ತ ತಲೆಗೇರಿದೆ ಎಂದು ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ ಕಿಡಿಕಾರಿದ್ದಾರೆ.
ನಗರದಲ್ಲಿಂದು ಹಳೇ ಹುಬ್ಬಳ್ಳಿಯಲ್ಲಿ ನಡೆದ ಘಟನೆಯ ಕುರಿತು ಮಾತನಾಡಿದ ಅವರು, ಕೇಸ್ ತೆಗೆದಿದ್ದಾರೆ ಅನ್ನೋ ಮಾಹಿತಿ ಸಿಕ್ಕಿದೆ. ನನಗೆ ಅಧಿಕೃತವಾಗಿ ಸಿಕ್ಕಿಲ್ಲ, ಇದು ತುಷ್ಟಿಕರಣದ ಪರಾಕಾಷ್ಟೆ ಕಾಂಗ್ರೆಸ್ ಪಕ್ಷ ತಲುಪಿದೆ. ಪೊಲೀಸ್ ಠಾಣೆ ಮೇಲೆ ದಾಲಿ ಮಾಡಿ, ಪೊಲೀಸ್ ಸಿಬ್ಬಂದಿ, ಅಧಿಕಾರಿಗಳ ಮೇಲೆ ಹಲ್ಲೆ ಮಾಡಲಾಗಿದೆ. ಇದು ಹಿಂದೂ ಮುಸ್ಲಿಂ ಪ್ರಶ್ನೆ ಅಲ್ಲಾ, ದೇಶದ್ರೋಹಿ ಹಾಗೂ ವ್ಯವಸ್ಥೆ ನಡುವಿನ ಹೋರಾಟ. ದೇಶದ್ರೋಹಿ ಶಕ್ತಿಗಳು ಭಾರತದ ಸಂವಿಧಾನ, ಕಾನೂನು ವ್ಯವಸ್ಥೆ ನಡುವಿನ ಹೋರಾಟ ಎಂದು ಆಕ್ರೋಶ ವ್ಯಕ್ತಪಡಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

