Breaking News

ಗೂಂಡಾಗಿರಿ ಮಾಡಿದವರ ಕೇಸನ್ನು ಈ ಸರ್ಕಾರ ವಾಪಸ್ ಪಡೆದಿದೆ : ಶೆಟ್ಟರ್ ವಾಗ್ದಾಳಿ

ಧಾರವಾಡ : ಯಾವ ಪ್ರಕರಣ ವಾಪಸ್ ಪಡೆಯಬೇಕು ಯಾವ ಪ್ರಕರಣ ವಾಪಸ್ ಪಡೆಯಬಾರದು ಎಂಬುದು ಸರ್ಕಾರಕ್ಕೆ ತಿಳಿಯಬೇಕಿತ್ತು. ಗೂಂಡಾಗಿರಿ ಮಾಡಿದವರ ಕೇಸನ್ನು ಈ ಸರ್ಕಾರ ವಾಪಸ್ ಪಡೆದಿದೆ ಎಂದು ಸಂಸದ ಜಗದೀಶ ಶೆಟ್ಟರ್ ವಾಗ್ದಾಳಿ ನಡೆಸಿದರು.

ಹುಬ್ಬಳ್ಳಿ ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ವಾಪಸ್‌ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಮಾತನಾಡಿದ ಅವರು, ಬೇರೆ ಬೇರೆ ಸರ್ಕಾರಗಳು ಅಧಿಕಾರದಲ್ಲಿದ್ದಾಗ ಕೇಸ್ ವಾಪಸ್ ಪಡೆಯುವುದು ಸಹಜ. ರೈತರ ಹೋರಾಟದ ಕೇಸ್‌ಗಳನ್ನು ವಾಪಸ್ ಪಡೆದರೆ ಸರಿ. ಆದರೆ, ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿ, ಪೊಲೀಸರ ಮೇಲೆ ಹಲ್ಲೆ ಮಾಡಿದವರ ಕೇಸುಗಳನ್ನು ವಾಪಸ್‌ ಪಡೆದಿದ್ದು ಸರಿಯಲ್ಲ. ಇದು ಕಾನೂನು ಮತ್ತು ಸುವ್ಯವಸ್ಥೆ ಹದಗೆಡಲು ಬೆಂಬಲ ನೀಡಿದಂತಾಗುತ್ತದೆ ಎಂದರು.

ಈ ಬಗ್ಗೆ ಕೈ ಸರ್ಕಾರ ಯೋಚಿಸಬೇಕಿತ್ತು. ಅವರಿಗೆ ಮತ್ತಷ್ಟು ಪ್ರೋತ್ಸಾಹ ಕೊಡಲು ಈ ರೀತಿ ಮಾಡಲಾಗುತ್ತಿದೆ. ಇದರಿಂದ ಕಾನೂನು ಮತ್ತು ಸುವ್ಯವಸ್ಥೆ ಮತ್ತಷ್ಟು ಹದಗೆಡುತ್ತದೆ. ಈ ನಿರ್ಧಾರ ಕಾನೂನಿನಡಿ ಎಷ್ಟು ನಿಲ್ಲುತ್ತದೆಯೋ ಗೊತ್ತಿಲ್ಲ. ಕೇಸಿನ ಫೈಲ್ ನೋಡಿದರೆ ಆ ಕೇಸನ್ನು ವಾಪಸ್ ಪಡೆಯಲು ಬರುವುದಿಲ್ಲ. ಆದರೂ ಕ್ಯಾಬಿನೆಟ್‌ನಲ್ಲಿ ಕೇಸ್ ವಾಪಸ್ ಪಡೆಯಲು ಒಪ್ಪಿಗೆ ನೀಡಲಾಗಿದೆ. ಇದು ಕಾನೂನು ಬಾಹಿರ. ಕೋರ್ಟ್‌ನಲ್ಲಿ ಯಾರಾದರೂ ಇದನ್ನು ಪ್ರಶ್ನಿಸಿದರು.

Share News

About Shaikh BigTv

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *