Breaking News

ಪತ್ರಕರ್ತರಿಗೆ ಉಚಿತ ಬಸ್‌ ಪಾಸ್‌ : ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಕೆ

ಕುಂದಗೋಳ : ಭಾಗದ ಪತ್ರಕರ್ತರಿಗೆ ಉಚಿತ ಬಸ್‌ ಪಾಸ್‌ ಸೇವೆ ಒದಗಿಸಿದ್ದಕ್ಕೆ ಯುವ ಕಾಂಗ್ರೆಸ್ ಕಾರ್ಯದರ್ಶಿ ಮಂಜುನಾಥ ಎಂಟೂವಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆಯನ್ನು ಮನವಿ ಪತ್ರದ ಮೂಲಕ ತಿಳಿಸಿದ್ದಾರೆ. ಕುಂದಗೋಳ ಗ್ರೇಡ್-2 ತಹಶೀಲ್ದಾರ್ ಹೆಚ್.ಎಸ್.ಭಜಂತ್ರಿ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಈ ಹಿಂದೆ ಗ್ರಾಮೀಣ ಭಾಗದ ಪತ್ರಕರ್ತರಿಗೆ ಉಚಿತ ಬಸ್‌ ಪಾಸ್, ಆರೋಗ್ಯ ವಿಮೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಮನ್ನಣೆ ನೀಡುವಂತೆ ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದ್ದ ಯುವ ಕಾಂಗ್ರೆಸ್ ಕಾರ್ಯದರ್ಶಿ ಮಂಜುನಾಥ ಎಂಟೂವಿ ಗಮನ ಸೆಳೆದಿದ್ದರು. ಇದೀಗ ಅಭಿನಂದನೆ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಮಂಜುನಾಥ್ ಎಂಟೂವಿ ಭರತ್ ಕಟಗಿ, ಸಚಿನ್‌ ಡಿಪಿ, ಶಿವು ಪೂಜಾರ, ಪುಟ್ಟರಾಜ ಹಾಗೂ ಹರೀಶ್ ಉಪಸ್ಥಿತರಿದ್ದರು.

Share News

About Shaikh BigTv

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *