Breaking News

ಲಾರಿ ನಿಯಂತ್ರಣ ತಪ್ಪಿ ಪಲ್ಟಿ : ಬೈಕ್‌ ಸವಾರ ಸಾವು

ಕಲಘಟಗಿ : ತಾಲ್ಲೂಕಿನ ರಾಮನಳ ಕ್ರಾಸ್ ಬಳಿ ಇಂದು ರಾತ್ರಿ ಕಲ್ಲು ತುಂಬಿದ ಲಾರಿ ನಿಯಂತ್ರಣ ತಪ್ಪಿ ಪಲ್ಟಿ ಆಗಿದ್ದು ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಂಭವಿಸಿದೆ.

ಹುಬ್ಬಳ್ಳಿ ಕಡೆ ಇಂದ ಕಲ್ಲುಗಳನ್ನು ತುಂಬಿಕೊಂಡು ಬರುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿ ಆಗಿದೆ. ಪರಿಣಾಮ ಕಲ್ಲುಗಳು ಬೈಕ್‌ ಸವಾರರ ಮೇಲೆ ಬಿದ್ದಿರುವ ಕಾರಣ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಹಾರೋಗೇರಿ ಗ್ರಾಮದ ಈರಣ್ಣ ವಸಂತ್ ಶೆಟ್ಟಪ್ಪನವರ ಸ್ಥಳದಲ್ಲಿ ಸಾವನಪ್ಪಿದ್ದಾನೆ. ಇನ್ನೊಬ್ಬ ಉಳವಪ್ಪ ಮುರಳ್ಳಿ ಗಂಭೀರ ಗಾಯವಾಗಿದ್ದು ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆಗೆ ಕಳುಹಿಸಲಾಗಿದೆ. ಸ್ಥಳಕ್ಕೆ ಕಲಘಟಗಿ ಪೊಲೀಸ್ ಸಿಬ್ಬಂದಿ ಆಗಮಿಸಿದ್ದು ತನಿಖೆ ನಡೆಸಿದ್ದಾರೆ.

Share News

About Shaikh BigTv

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *