Breaking News

ದೇಶಾದ್ಯಂತ ವಿಜಯದಶಮಿ ಸಂಭ್ರಮ: ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರಿಂದ ಶುಭಾಶಯ

ಬೆಂಗಳೂರು: ಇಂದು (ಶನಿವಾರ) ದೇಶದಾದ್ಯಂತ ಸಂಭ್ರಮದ ವಿಜಯದಶಮಿ ಆಚರಿಸಲಾಗುತ್ತಿದೆ. ಸಡಗರದ ವಿಜಯದಶಮಿ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಜನತೆಗೆ ಶುಭಾಶಯ ತಿಳಿಸಿದ್ದಾರೆ.
ದೇಶದ ಜನತೆಗೆ ಶುಭಾಶಯ ತಿಳಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ವಿಜಯದಶಮಿಯ ಶುಭ ಸಂದರ್ಭದಲ್ಲಿ, ನಾನು ಎಲ್ಲಾ ದೇಶವಾಸಿಗಳಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಇದು ಅನ್ಯಾಯದ ವಿರುದ್ಧ ನ್ಯಾಯದ ವಿಜಯದ ಹಬ್ಬವಾಗಿದೆ. ಈ ಹಬ್ಬವು ಸತ್ಯ ಮತ್ತು ನೈತಿಕತೆಯ ಮೌಲ್ಯಗಳಲ್ಲಿ ನಮ್ಮ ನಂಬಿಕೆಯ ಸಂಕೇತವಾಗಿದೆ. ಈ ಸುಸಂದರ್ಭದಲ್ಲಿ ಅತ್ಯಂತ ಕ್ಲಿಷ್ಟಕರ ಸಂದರ್ಭದಲ್ಲೂ ನ್ಯಾಯದ ಪರವಾಗಿ ನಿಲ್ಲುತ್ತೇವೆ ಎಂದು ಪ್ರತಿಜ್ಞೆ ಮಾಡಬೇಕು. ಈ ಪವಿತ್ರ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರಲಿ ಮತ್ತು ನಮ್ಮ ದೇಶವು ಯಾವಾಗಲೂ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯಲಿ ಎಂದು ನಾನು ಬಯಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ದುರ್ಗಾ ಮಾತೆ ಮತ್ತು ಪ್ರಭು ಶ್ರೀರಾಮನ ಆಶೀರ್ವಾದದಿಂದ ನೀವೆಲ್ಲರೂ ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಜಯ ಸಾಧಿಸಬೇಕೆಂದು ನಾನು ಬಯಸುತ್ತೇನೆ. ವಿಜಯದಶಮಿಯು ದುರ್ಗಾ ಪೂಜೆಯ ಕೊನೆಯ ದಿನವಾಗಿದೆ ಮತ್ತು ರಾಕ್ಷಸ ದೊರೆ ರಾವಣನ ಮೇಲೆ ಶ್ರೀರಾಮನ ವಿಜಯವನ್ನು ಸ್ಮರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಶುಭ ಹಾರೈಸಿದ್ದಾರೆ.
ಅನ್ಯಾಯದ ಮೇಲೆ ನ್ಯಾಯ ಮತ್ತು ಅಸತ್ಯದ ಮೇಲೆ ಸತ್ಯದ ವಿಜಯದ ಮಹಾ ಹಬ್ಬ ವಿಜಯದಶಮಿಯಂದು ಸಮಸ್ತ ನಾಡಿನ ಜನತೆಗೆ ಹೃತ್ಪೂರ್ವಕ ಶುಭಾಶಯಗಳು. ಈ ಹಬ್ಬವು ನಿಮ್ಮ ಜೀವನದಲ್ಲಿ ಸಂತೋಷವನ್ನು ತುಂಬುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ದೇಶದ ಜನರಿಗೆ ಶುಭ ಕೋರಿದ್ದಾರೆ.
ಸತ್ಯ, ನ್ಯಾಯ ಮತ್ತು ನಿಜವಾದ ಧರ್ಮದ ಗೆಲುವಿನ ಸಂದೇಶ ಸಾರುವ ವಿಜಯದಶಮಿ, ಸುಳ್ಳು, ಅನ್ಯಾಯ ಮತ್ತು ಅಧರ್ಮದ ವಿರುದ್ಧ ಧೈರ್ಯದಿಂದ ದನಿ ಎತ್ತಲು ಪ್ರೇರಣೆಯಾಗಲಿ. ಶಾಂತಿ, ಪ್ರೀತಿ, ಸೌಹಾರ್ದತೆ ಮತ್ತು ಸಹಬಾಳ್ವೆಯ ಬೆಳಕು ಎಲ್ಲೆಡೆ ಪಸರಿಸಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸುತ್ತೇನೆ. ನಾಡಬಾಂಧವರಿಗೆ ವಿಜಯದಶಮಿಯ ಹಾರ್ದಿಕ ಶುಭಾಶಯಗಳು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಸತ್ಯ, ನ್ಯಾಯ ಮತ್ತು ನಿಜವಾದ ಧರ್ಮದ ಗೆಲುವಿನ ಸಂದೇಶ ಸಾರುವ ವಿಜಯದಶಮಿ, ಸುಳ್ಳು, ಅನ್ಯಾಯ ಮತ್ತು ಅಧರ್ಮದ ವಿರುದ್ಧ ಧೈರ್ಯದಿಂದ ದನಿ ಎತ್ತಲು ಪ್ರೇರಣೆಯಾಗಲಿ. ಶಾಂತಿ, ಪ್ರೀತಿ, ಸೌಹಾರ್ದತೆ ಮತ್ತು ಸಹಬಾಳ್ವೆಯ ಬೆಳಕು ಎಲ್ಲೆಡೆ ಪಸರಿಸಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸುತ್ತೇನೆ ಎಂದರು.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *