Breaking News

ಶಿವಮೊಗ್ಗದಲ್ಲಿ ಭಾರೀ ಮಳೆ: ನಷ್ಟದ ಹಾದಿ ಹಿಡಿದ ನೂರಾರು ಎಕರೆ ಬೆಳೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ ಅಡಿಕೆ ಮತ್ತು ಭತ್ತ ಬೆಳೆಯುವ ರೈತರಿಗೆ ಸಂಕಷ್ಟವನ್ನು ತಂದಿದೆ. ಭತ್ತದ ಗದ್ದೆಯಲ್ಲಿ ಕೀಟಬಾಧೆ ಕಾಣಿಸಿಕೊಂಡಿದ್ದು ನೂರಾರು ಎಕರೆ ಬೆಳೆ ನಷ್ಟದ ಹಾದಿಯತ್ತ ಸಾಗಿದೆ. ಭತ್ತದ ಬೆಳೆಯ ಕೀಟಬಾಧೆಯನ್ನು ಹೋಗಲಾಡಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಂಟಿ ಕೃಷಿ ನಿರ್ದೇಶಕರಾದ ಕಿರಣ್ ಕುಮಾರ್ ಎಂ. ರೈತರಿಗೆ ಸಲಹೆಗಳನ್ನು ನೀಡಿದ್ದಾರೆ.
ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಕನ್ನಂಗಿ ಪಂಚಾಯತಿ ಗರಗ ಕಿಕ್ಕೇರಿಯ ಭತ್ತದ ಗದ್ದೆಗಳಲ್ಲಿ ಕೀಟಬಾಧೆಯಿಂದ ನೂರಾರು ಎಕರೆ ಬೆಳೆ ನಷ್ಟದ ಹಾದಿಯಲ್ಲಿದೆ. ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಮತ್ತು ತಹಶೀಲ್ದಾರ್ ಜೊತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದೆ ಎಂದು ಹೇಳಿದ್ದಾರೆ.
ರೈತರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿ, ಕೂಡಲೇ ಅಗತ್ಯ ಅನುದಾನ ನೀಡಿ ರೈತರಿಗೆ ನೆರವಾಗಬೇಕೆಂದು ಸರ್ಕಾರವನ್ನು ಆಗ್ರಹಿಸುತ್ತೇನೆ ಎಂದು ಸಹ ಮಾಜಿ ಸಚಿವ, ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *