Breaking News

ಎಸ್ಬಿಎಸ್ 3 ಮಹತ್ವಾಕಾಂಕ್ಷಿ ಯೋಜನೆಗೆ ಪ್ರಧಾನಿ ಮೋದಿ ಒಪ್ಪಿಗೆ

ನವದೆಹಲಿ: ಬಾಹ್ಯಾಕಾಶದಿಂದ ಕಣ್ಗಾವಲು ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸ್ಪೇಸ್ ಬೇಸ್ಡ್ ಸರ್ವೈವಲೆನ್ಸ್ (ಎಸ್ಬಿಎಸ್-3) ಮಹತ್ವಾಕಾಂಕ್ಷಿ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಭದ್ರತೆ ಕುರಿತ ಸಂಪುಟ ಸಮಿತಿ ಒಪ್ಪಿಗೆ ನೀಡಿದೆ.
ಈ ಯೋಜನೆಯಡಿ ಹಲವು ಬೇಹುಗಾರಿಕೆ ಉಪಗ್ರಹಗಳನ್ನು ಕೆಳ ಭೂ ಮತ್ತು ಭೌಗೋಳಿಕ ಕಕ್ಷೆಗೆ ಕಳುಹಿಸಲು ಉದ್ದೇಶಿಸಲಾಗಿದೆ. ಇತ್ತೀಚೆಗೆ ನಡೆದ ಸಿಸಿಎಸ್ ಸಭೆಯಲ್ಲಿ ಎಸ್ಬಿಎಸ್-3 ಯೋಜನೆಯಡಿ 52 ಉಪಗ್ರಹಗಳನ್ನು ಉಡಾಯಿಸುವ ಪ್ರಸ್ತಾವಕ್ಕೆ ಒಪ್ಪಿಗೆ ನೀಡಲಾಗಿದ್ದು, ಇದಕ್ಕೆ ಸುಮಾರು 27 ಸಾವಿರ ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಉನ್ನತ ಮೂಲಗಳು ಹೇಳಿವೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *