Breaking News

50 ವರ್ಷಗಳ ಬಳಿಕ ಸಹರಾ ಮರಭೂಮಿಯಲ್ಲಿ ಭಾರೀ ಪ್ರವಾಹ

ನವದೆಹಲಿ: ವಿಶ್ವದ ಅತಿದೊಡ್ಡ ಮರುಭೂಮಿ ಎಂದು ಕರೆಯುವ ಸಹರಾ ಮರುಭೂಮಿ ಭಾರಿ ಪ್ರಮಾಣದಲ್ಲಿ ಪ್ರವಾಹವಾಗಿದ್ದು, ಅಚ್ಚರಿಯಾದರೂ ಇದು ಸತ್ಯವಾಗಿದೆ.
ವಿಶ್ವದ ಅತಿದೊಡ್ಡ ಮರುಭೂಮಿ ಎಂದು ಕರೆಯುವ ಸಹರಾ ಮರುಭೂಮಿ ಮರಳುಗಾಡು ಪ್ರದೇಶವಾಗಿದ್ದು, ಇಲ್ಲಿ ಧಾರಾಕಾರ ಮಳೆಯಿಂದ ನೀರು ಹರಿಯುತ್ತಿರುವ ಸೆಟಲೈಟ್‌ ಚಿತ್ರಗಳು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.
ಇದು ಕಳೆದ 50 ವರ್ಷಗಳಲ್ಲೇ ಮೊದಲ ಬಾರಿಗೆ ಸಹರಾ ಮರುಭೂಮಿ ಪ್ರವಾಹಕ್ಕೆ ಸಾಕ್ಷಿಯಾಗಿರುವುದಾಗಿ ವರದಿ ತಿಳಿಸಿದೆ.
ಇನ್ನು ಆಗ್ನೇಯ ಮೊರಾಕೊದಲ್ಲಿ ಕಳೆದ ಎರಡು ದಿನಗಳ ಧಾರಾಕಾರ ಮಳೆ ಸುರಿಯುತ್ತಿದ್ದು, ಇದು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೀವ್ರ ಪ್ರವಾಹಕ್ಕೆ ಕಾರಣವಾಗಿದೆ. ಕಳೆದ 2 ದಿನಗಳಲ್ಲಿ ಸುರಿದ ಮಳೆ ಇಲ್ಲಿನ ವಾರ್ಷಿಕ ಸರಾಸರಿಯನ್ನೇ ಮೀರಿಸಿದ್ದು, ರಾಜಧಾನಿ ರಬತ್‌ನ ದಕ್ಷಿಣಕ್ಕೆ 450 ಕಿಮೀ ದೂರದಲ್ಲಿರುವ ಟಗೌನೈಟ್ ಗ್ರಾಮದಲ್ಲಿ ಕೇವಲ 24 ಗಂಟೆಗಳಲ್ಲಿ 100 ಮಿಮೀ ಮಳೆಯಾಗಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *