ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಕೋಮು ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದು, ನಾಳೆ ಸಿಎಂ ಸಿದ್ದರಾಮಯ್ಯ ಅವರು ಹುಬ್ಬಳ್ಳಿ ಧಾರವಾಡಕ್ಕೆ ಆಗಮಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಈ ಕೇಸ್ ವಜಾಗೊಳಿಸಬಾರದೆಂದು ಮನವಿ ಸಲ್ಲಿಸಲಾಗುತ್ತದೆ. ಅದಕ್ಕೂ ಬಗ್ಗದೆ ಇದ್ರೆ ಧಾರವಾಡ ಜಿಲ್ಲಾ ಬಿಜೆಪಿ ವತಿಯಿಂದ ಉಗ್ರವಾದ ಹೋರಾಟ ಮಾಡಲಾಗುತ್ತದೆಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಮ್ಮ ಮನವಿಗೆ ಮುಖ್ಯಮಂತ್ರಿಗಳು ಸ್ಪಂದನೆ ಮಾಡಿ ಈ ಕೇಸ್ ಹಿಂಪಡೆಯದೆ ಇದ್ರೆ ಇಲ್ಲಿಗೆ ಬಿಡುತ್ತೇವೆ, ಇಲ್ಲವಾದ್ರೆ ನಿರಂತರವಾಗಿ ಹೋರಾಟ ಮಾಡಲಾಗುತ್ತದೆಂದು ಎಚ್ಚರಿಕೆ ಕೊಟ್ಟಿದ್ದಾರೆ. ಈ ಕಾಂಗ್ರೆಸ್ ಸರ್ಕಾರ ದೇಶ ವಿರೋಧಿಗಳಿಗೆ ಸಪೋರ್ಟ್ ಮಾಡ್ತಿದೆ. ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ, ಜೀಪ್ ಒಡೆದಿದ್ದಾರೆ. ಪೊಲೀಸ್ ಠಾಣೆ ಮೇಲೆ ಕಲ್ಲು ಎಸೆದಿದ್ದಾರೆ. ಇಷ್ಟಾದ್ರೂ ಈ ಸರ್ಕಾರ ಅಂತವರಿಗೆ ಬೆಂಬಲ ನೀಡ್ತಿದೆ. ಇದನ್ನು ನಾವು ಖಂಡಿಸುತ್ತೇವೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

