Breaking News

ಹಳೇ ಹುಬ್ಬಳ್ಳಿಯ ಪೊಲೀಸ್‌ ಠಾಣೆ ಪ್ರಕರಣ ಕುರಿತು ಯಾವುದೇ ಮಾಹಿತಿ ಇಲ್ಲಾ: ಕಮಿಷನ‌ರ್ ಎನ್‌.ಶಶಿಕುಮಾ‌ರ್

ಹುಬ್ಬಳ್ಳಿ: ರಾಜ್ಯ ಸರ್ಕಾರ ಹಳೇ ಹುಬ್ಬಳ್ಳಿಯ ಪೊಲೀಸ್‌ ಠಾಣೆಯ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ಮಾಡಿದವರ ವಿರುದ್ಧ ದಾಖಲಾಗಿದ್ದ ಕೇಸ್‌ಗಳನ್ನು ವಾಪಸ್ ಪಡೆದಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಕಮಿಷನ‌ರ್ ಎನ್‌.ಶಶಿಕುಮಾ‌ರ್ ಪ್ರತಿಕ್ರಿಯೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರ ಕೇಸ್ ಹಿಂದೆ ಪಡೆದಿರೋ ವಿಚಾರಕ್ಕೆ ಸಂಬಂಧಿಸಿದಂತೆ ವಿವಿಧ ಪಕ್ಷದ ಮುಖಂಡರು ಹೇಳಿಕೆ ನೀಡಿದ್ದನ್ನು ನೋಡಿದ್ದೇನೆ. ಆದ್ರೆ ನಮಗೆ ಹಿರಿಯ ಅಧಿಕಾರಿಗಳಿಂದ ಹಾಗೂ ಸರ್ಕಾರದಿಂದ ಯಾವುದೇ ರೀತಿಯಾದ ಮಾಹಿತಿ ಬಂದಿಲ್ಲ.

ಈ ಕುರಿತು ನಮ್ಮ ಹಿರಿಯ ಅಧಿಕಾರಿಗಳ ಗಮನಕ್ಕೆ ಈ ವಿಚಾರ ತಂದಿದ್ದು ಅವರು ಏನು ಕ್ರಮ ಕೈಗೊಳ್ಳುತ್ತಾರೋ ಅದರ ಮೇಲೆ ನಮ್ಮ ಮುಂದಿನ ನಡೆ ಎಂದು ಕಮಿಷನ‌ರ್ ಎನ್.ಶಶಿಕುಮಾ‌ರ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

Share News

About Shaikh BigTv

Check Also

ಬೆಂಗಳೂರಲ್ಲಿ ಅಂಗಡಿಯಲ್ಲೇ ಮಾಲೀಕನ ಬರ್ಬರ ಕೊಲೆ

ಬೆಂಗಳೂರು: ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೃಹೋಪಯೋಗಿ ವಸ್ತುಗಳ ಅಂಗಡಿ ಮಾಲೀಕ ರಾಜು ಸಿಂಗ್ ಅವರನ್ನು ಅಂಗಡಿಯೊಳಗೇ ಬರ್ಬರವಾಗಿ ಕೊಲೆ …

Leave a Reply

Your email address will not be published. Required fields are marked *