ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷ ಇಸ್ಲಾಮಿಕ್ ಭಯೋತ್ಪಾದಕರಿಗೆ ಬೆಂಬಲಿತ ಪಾರ್ಟಿ ಎಂಬುದಕ್ಕೆ ಸಾಕ್ಷಿ ಹಳೇ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣವನ್ನು ಹಿಂದಕ್ಕೆ ತೆಗೆದುಕೊಂಡಿರುವುದರಲ್ಲಿಯೇ ಕಂಡು ಬರುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಜ್ಯ ಸರಕಾರದ ವಿರುದ್ಧ ಹರಿಹಾಯ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹುಬ್ಬಳ್ಳಿಗೆ ಬರುತ್ತಿರೋ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಅಧಿಕಾರಿಗಳು ಕೂಡ ನೀವು ಯಾವ ಕಾರಣಕ್ಕಾಗಿ ಪ್ರತಿಭಟನೆ ಹಮ್ಮಿಕೊಂಡಿದ್ದೀರಾ ಅಂತಾ ಕೇಳಿದ್ದಾರೆ. ನಾನು ಅವರಿಗೆ ಹೇಳಿದ್ದು ನಾವು ನಮ್ಮ ಸಲುವಾಗಿ ಪ್ರತಿಭಟನೆ ಮಾಡುತ್ತಿಲ್ಲ ನಿಮ್ಮ ಸಲುವಾಗಿ ಪ್ರತಿಭಟನೆ ಮಾಡುತ್ತಿದ್ದೇವೆ. ಹಳೇ ಹುಬ್ಬಳ್ಳಿ ಗಲಾಟೆಯಲ್ಲಿ ಪೊಲೀಸರ ಹತ್ಯೆಗೆ ಪ್ಲಾನ್ ಮಾಡಲಾಗಿತ್ತು. ಆ ವಿಚಾರ ಚಾರ್ಜ್ ಶೀಟ್‌ನಲ್ಲಿದೆ. ಇಂತಹ ಉಗ್ರಗಾಮಿಗಳಿಗೆ ಕಾಂಗ್ರೆಸ್ ಪಕ್ಷ ಸಪೋರ್ಟ್ ಮಾಡುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪ್ರಹ್ಲಾದ್ ಜೋಶಿ ಟಾಂಗ್ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

