Breaking News

42 ಪ್ರಕರಣಗಳನ್ನು ವಾಪಾಸ್ ಪಡೆದುಕೊಂಡಿದ್ದೇವೆ :ಮುಖ್ಯಮಂತ್ರಿ ಸಿದ್ದರಾಮಯ್ಯ

ಹುಬ್ಬಳ್ಳಿ: ಬಿಜೆಪಿಯವರು ಕೇವಲ ಸುಳ್ಳು, ನಿರಾಧಾರ ವಿಚಾರಗಳ ಮೇಲೆ ಪ್ರತಿಭಟನೆ ಮಾಡುತ್ತಾರೆ. ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿದಂತೆ 42 ಪ್ರಕರಣವನ್ನು ವಾಪಾಸ್‌ ಪಡೆದ ವಿಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಇಂತಹ ಪ್ರಕರಣಗಳಿಗಾಗಿ ಸಂಪುಟ ಖಾತೆಯ ಉಪಸಮಿತಿ ರಚನೆ ಮಾಡಲಾಗಿರುತ್ತದೆ. ಅದು ಸಲ್ಲಿಸಿದ ವರದಿ ಆಧರಿಸಿ ನಾವು 42 ಪ್ರಕರಣಗಳನ್ನು ವಾಪಾಸ್ ಪಡೆದುಕೊಂಡಿದ್ದೇವೆ. ಈ ಎಲ್ಲ ಪ್ರಕರಣಗಳು ನಂತರ ಕೋರ್ಟ್’ಗೆ ಹೋಗುತ್ತದೆ. ಅಲ್ಲಿ ಅನುಮತಿ ಬಂದ ನಂತರ ವಾಪಾಸ್ ಪಡೆಯಲು ಸಾಧ್ಯ. ಇಲ್ಲದೇ ಹೋದಲ್ಲಿ ವಾಪಾಸ್ ಪಡೆಯಲು ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಹಳೇ ಹುಬ್ಬಳ್ಳಿ ಗಲಭೆ ಕೇಸ್ ಜೊತೆಗೆ ಇದೇ ತರಹದ ವಿವಿಧ ಪ್ರಕರಣಗಳನ್ನು ಸಹ ವಾಪಾಸ್‌ ಪಡೆದಿದ್ದೇವೆ ಎಂದರು.

Share News

About Shaikh BigTv

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *