Breaking News

ಸವದತ್ತಿಯ ಅಭಿವೃದ್ದಿಯ ಪರ್ವಕಾಲ ಈಗ ಆರಂಭವಾಗಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ : ಭಾಷೆ, ಗಡಿಗಳನ್ನು ಮೀರಿ ನಿಂತಿರುವ ಸವದತ್ತಿ ಯಲ್ಲಮ್ಮ ದೇವಸ್ಥಾನ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿಯಾಗಿಲ್ಲ ಎನ್ನುವ ಕೊರಗು ನಮ್ಮೆಲ್ಲರಲ್ಲಿದೆ. ಆದರೆ ಈ ಕಾಯುವಿಕೆಗೆ ಈಗ ಅಂತ್ಯಕಾಲ ಬಂದಿದೆ ಅಭಿವೃದ್ಧಿಯ ಪರ್ವಕಾಲ ಈಗ ಆರಂಭವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಸವದತ್ತಿಯಲ್ಲಿ ಭಾನುವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಸವಣ್ಣನವರ ಚಿಂತನೆ ಅಳವಡಿಸಿಕೊಂಡಿದ್ದಾರೆ, ಕಾಯಕವೇ ಕೈಲಾಸ ಎನ್ನುವ ತತ್ವ ಅಳವಡಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಕಳೆದ 40 ವರ್ಷದಿಂದ ಕಪ್ಪು ಚುಕ್ಕೆ ಇಲ್ಲದೆ ರಾಜ್ಯದ ಸೇವೆ ಮಾಡುತ್ತಿದ್ದಾರೆ ಎಂದು ಹೆಬ್ಬಾಳಕರ್ ಹೇಳಿದರು.
ನಮ್ಮ ಸರಕಾರ ಕೊಟ್ಟ ಭಾಷೆಯಂತೆ ಕೆಲಸ ಮಾಡುತ್ತಿದೆ. ಸಿದ್ದರಾಮಯ್ಯ ಅವರ ಮೇಲೆ ಬಂದಿರುವ ಆರೋಪಗಳು ಅಪ್ರಸ್ತುತ. ಸವದತ್ತಿ ಯಲ್ಲಮ್ಮ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಅವರು ಈಗಾಗಲೇ ಸಂಕಲ್ಪ ಮಾಡಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಹಲವಾರು ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಭಕ್ತರಿಗೆ ಪ್ರಿಯವಾದ ದೇವಸ್ಥಾನ ಸವದತ್ತಿ ಯಲ್ಲಮ್ಮ ದೇವಸ್ಥಾನ. ಭಾಷೆ, ಸೀಮೆ ಮೀರಿರುವ ದೇವಸ್ಥಾನ ಇದು. ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಇಲ್ಲಿ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.
ಪ್ರವಾಸೋದ್ಯಮ ಇಲಾಖೆಯಿಂದ, ಲೋಕೋಪಯೋಗಿ ಇಲಾಖೆಯಿಂದ ಹಾಗೂ ಮಹಿಳಾ ಅಭಿವೃದ್ಧಿ ನಿಗಮದಿಂದ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಇನ್ನೂ ವಿವಿಧ ಹಂತಗಳಲ್ಲಿ ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *