ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಮಾಡಿದವರ ವಿರುದ್ಧ ದಾಖಲಾದ ಪ್ರಕರಣವನ್ನು ರಾಜ್ಯ ಸರ್ಕಾರಕ್ಕೆ ಹಿಂದೆ ಪಡೆದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಿಎಂ ಕಾರಿಗೆ ಮುತ್ತಿಗೆಯನ್ನು ಹಾಕಲು ಅಕ್ಷಯ ಪಾರ್ಕ್ನಲ್ಲಿ ಮುಂದಾಗಿದ್ದರು.
ಈ ವೇಳೆ ಯಾವುದೇ ರೀತಿಯಾದ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಜೆಪಿ ಶಾಸಕ ಮಹೇಶ ತೆಂಗಿನಕಾಯಿ ಸೇರಿದಂತೆ ಹಲವರನ್ನು ನಾಯಕರನ್ನು ಬಂಧಿಸಿ ಎಚ್ಚರಿಕೆ ವಹಿಸಿದ್ದಾರೆ.
ಆದ್ರೂ ಕೂಡಾ ವಿಮಾನ ನಿಲ್ದಾಣದಿಂದ ಧಾರವಾಡಕ್ಕೆ ರಸ್ತೆ ಮಾರ್ಗವಾಗಿ ಹೊರಟಿದ್ದ ಸಿಎಂಗೆ ಅಕ್ಷಯ ಪಾರ್ಕ್ ಬಳಿಯಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರು ಕಪ್ಪು ಬಟ್ಟೆ ತೋರಿಸಲು ಮುಂದಾದಾಗ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಗದೀಶ್ ಹಾಗೂ ಮಂಜುನಾಥ್ ಅವರನ್ನು ವಶಕ್ಕೆ ಪಡೆದಿರೋ ಪೊಲೀಸರು ಗೋಕುಲ್ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

