Breaking News

ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ 5,267 ಹುದ್ದೆಗಳ ನೇಮಕಾತಿ: ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಲಾಗಿದ್ದು, ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಖಾಲಿ ಇರುವಂತ 5,267 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಅನುಮತಿ ನೀಡಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕ 103ರಲ್ಲಿ ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹಾಗೂ ಪದವಿ ಪೂರ್ವ ಕಾಲೇಜುಗಳ ವಿವಿಧ ವಿಷಯಗಳ ಶಿಕ್ಷಕರು / ಉಪನ್ಯಾಸಕರುಗಳನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದು ಘೋಷಿಸಲಾಗಿರುತ್ತದೆ ಎಂದಿದ್ದಾರೆ.
ಅದರಂತೆ, ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂರಾಗಿ ವಸ್ತುತ ಖಾಲಿ ಇರುವ ಒಟ್ಟು 6584 ಶಿಕ್ಷಕರ ಹುದ್ದೆಗಳ ವೈಕಿ ಶೇ. 80 ರಷ್ಟು ಅಂದರೆ ಒಟ್ಟು 5267 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅನುಮತಿ ನೀಡುವಂತೆ ಕೋರಿ ಹುದ್ದೆಗಳ ವಿವರಗಳೊಂದಿಗೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರು ಮೇಲೆ ಓದಲಾದ ಕ್ರಮಾಂಕ (2)ರಲ್ಲಿ ಸರ್ಕಾರಕ್ಕೆ ವುಸ್ತಾವನೆಯನ್ನು ಸಲ್ಲಿಸಿರುತ್ತಾರೆ.
ವಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 103ರಲ್ಲಿ ಘೋಷಿಸಿರುವಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂರಾಗಿ ಪ್ರಸ್ತುತ ಖಾಲಿ ಇರುವ ಒಟ್ಟು 6584 ಶಿಕ್ಷಕರ ಹುದ್ದೆಗಳ ಪೈಕಿ ಶೇ. 80 ರಷ್ಟು ಅಂದರೆ ಈ ಕೆಳಗೆ ವಿವರಿಸಲಾದಂತ ಒಟ್ಟು 5267 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರದ ಅನುಮತಿ ನೀಡಿ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *