Breaking News

ತುಂಗಭದ್ರ ಜಲಾಶಯದಲ್ಲಿ ಹೆಚ್ಚಿದ ಒಳಹರಿವು: ನದಿ ಪಾತ್ರದ ಜನರಿಗೆ ಎಚ್ಚರಿಕೆ

ಕೊಪ್ಪಳ: ಕಲ್ಯಾಣ ಕರ್ನಾಟಕದ ಜೀವನಾಡಿ ತುಂಗಾಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಜಲಾಶಯಕ್ಕೆ 84,000 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಜಲಾಶಯದಿಂದ ನದಿಗೆ 78,000 ಕ್ಯುಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಇದರಿಂದಾಗಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಒಳಹರಿವು ಹೆಚ್ಚಾದರೆ ಹೊರಹರಿವನ್ನು ಹೆಚ್ಚಿಸುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಒಟ್ಟು 105.788 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವನ್ನು ಜಲಾಶಯ ಹೊಂದಿದೆ. ಆ.10 ರಂದು ಜಲಾಶಯದ 19 ನೇ ಕ್ರಸ್ಟ್‌ ಗೇಟ್ ಕೊಚ್ಚಿಕೊಂಡು ಹೋಗಿತ್ತು. ಹೀಗಾಗಿ ಸಂಪೂರ್ಣ ಜಲಾಶಯ ಭರ್ತಿ ಮಾಡದೇ ಇರಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಪ್ರಸ್ತುತ ಜಲಾಶಯದಲ್ಲಿ 101.656 ಟಿಎಂಸಿ ನೀರು ಸಂಗ್ರಹವಾಗಿದೆ.

Share News

About bigtvnews22

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *