Breaking News

ರೈತರಿಗೆ ಸಂಕಷ್ಟ ತಂದ ಮಳೆರಾಯ

ಕಲಘಟಗಿ : ಕಲಘಟಗಿ ತಾಲ್ಲೂಕಿನ ರೈತರು ಹಲವು ವರ್ಷಗಳಿಂದ ತಮ್ಮ ಹೊಲಗಳಲ್ಲಿ ಕಬ್ಬು ಬೆಳೆಯುತ್ತಿದ್ದಾರೆ. ಕಳೆದ ವರ್ಷ ಮಳೆ ಕಡಿಮೆಯಾಗಿದ್ದರಿಂದ ಕಬ್ಬಿನ ಬೆಳೆ ಇಳುವರಿ ಬಾರದೆ ಇರುವುದರಿಂದ ರೈತ ಸಂಕಷ್ಟ ಎದುರಿಸಿದ್ದಾನೆ. ಈ ವರ್ಷ ಅದೇ ರೀತಿ ನಷ್ಟ ಅನುಭವಿಸಬಾರದು ಎಂದು ಬಹಳಷ್ಟು ರೈತರು ಕಬ್ಬುಗಳನ್ನು ತೆಗೆದು ಗೋವಿನ ಜೋಳ ಬಿತ್ತನೆ ಮಾಡಿದ್ದಾರೆ.

ಆದರೆ ರೈತನ ದುರದೃಷ್ಟಕ್ಕೆ ಈ ವರ್ಷ ಹೆಚ್ಚು ಮಳೆ ಆಗಿದ್ದು ಹೊಲಗಳಲ್ಲಿ ನೀರು ನಿಂತು ಗೋವಿನ ಜೋಳ ಬೆಳೆ ಸಂಪೂರ್ಣ ಹಾಳು ಆಗಿರುವ ಕಾರಣ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಇದನ್ನು ಗಮನಿಸಬೇಕಾದ ರಾಜ್ಯ ಸರ್ಕಾರ ಬಿಟ್ಟಿ ಭಾಗ್ಯಗಳಿಗೆ ತಲೆ ಕೆಡಿಸಿಕೊಂಡಿದ್ದು ಸರ್ಕಾರಕ್ಕೆ ರೈತರ ಸಂಕಷ್ಟ ಕಾಣದೆ ಇರೋದು ವಿಪರ್ಯಾಸವಾಗಿದೆ.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *