Breaking News

ಮಹಾತ್ಮಾ ಗಾಂಧಿ ಪ್ರತಿಮೆಯ ಮಾಯವಾದ ಕನ್ನಡಕ

ಕಲಘಟಗಿ : ತಾಲ್ಲೂಕಿನ ಗಳಗಿ ಹುಲಕೊಪ್ಪ ಗ್ರಾಮದ ಗಾಂಧಿ ಸರ್ಕಲ್ ನಲ್ಲಿ ಮಹಾತ್ಮಾ ಗಾಂಧಿ ಅವರ ಪ್ರತಿಮೆ ಇರಿಸಲಾಗಿದೆ. ಆದರೆ, ಕಳೆದ ಎರಡು ತಿಂಗಳಿಂದಲೂ ಈ ಪ್ರತಿಮೆಗೆ ಹಾಕಲಾಗಿದ್ದ ಕನ್ನಡಕ “ಮಾಯ”ವಾಗಿದೆ!

ಕನ್ನಡಕ ಇಲ್ಲದೇ ಇಲ್ಲಿಯ ಗ್ರಾಮ ಪಂಚಾಯತ್ ಅಧಿಕಾರಿಗಳು ಗಾಂಧಿ ಜಯಂತಿಯನ್ನು ಆಚರಿಸಿ ಮಹಾತ್ಮರಿಗೆ ಅವಮಾನಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಷ್ಟೆಲ್ಲಾ ತಿಳಿದಿದ್ದರೂ ಈ ಬಗ್ಗೆ ಇಲ್ಲಿಯ ಗ್ರಾಮ ಪಂಚಾಯತ್ ಅಧಿಕಾರಿಗಳು ಕಂಡು ಕಾಣದಂತೆ ಕೂತಿದ್ದಾರೆ. ಕೂಡಲೇ ಸಂಬಂಧಪಟ್ಟ ಮೇಲಧಿಕಾರಿಗಳು ಇತ್ತ ಕಡೆ ಗಮನ ಹರಿಸಿ ಮಹಾತ್ಮರಿಗೆ ಮಾಡಿದ ಅವಮಾನಕ್ಕಾಗಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Share News

About Shaikh BigTv

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *