Breaking News

ಬಳ್ಳಾರಿಯಲ್ಲಿ ಇಂದು ಸಿಎಂ ಸಿದ್ದರಾಮಯ್ಯರಿಂದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಬಳ್ಳಾರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಟು ಬೆಳಿಗ್ಗೆ 10.50 ಗಂಟೆಗೆ ತೋರಣಗಲ್ಲಿನ ಜಿಂದಾಲ್ ಏರ್ಸ್ಟ್ರಿಪ್ ಗೆ ಆಗಮಿಸುವರು.
ಬಳಿಕ ಮುಖ್ಯಮಂತ್ರಿಗಳು ಬೆಳಿಗ್ಗೆ 11.15 ಗಂಟೆಗೆ ಸಂಡೂರಿಗೆ ಆಗಮಿಸಿ, ಬಳ್ಳಾರಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಇವರ ವತಿಯಿಂದ ಸಂಡೂರು ಪಟ್ಟಣದ ಅಗ್ನಿಶಾಮಕದಳ ಮುಂಭಾಗದ ವಿಶ್ವಾಸ್ ಯು.ಲಾಡ್ ಮೈದಾನದ ಆವರಣದಲ್ಲಿ ಆಯೋಜಿಸಿರುವ ಸಂಡೂರು ತಾಲ್ಲೂಕಿನ ಸಾಧನಾ ಸಮಾವೇಶ, ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ವಿವಿಧ ಯೋಜನೆಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಮುಖ್ಯಮಂತ್ರಿಗಳು ಅದೇ ದಿನ ಮಧ್ಯಾಹ್ನ 03.55 ಗಂಟೆಗೆ ತೋರಣಗಲ್ಲಿಗೆ ತೆರಳಿ ಇಲ್ಲಿನ ಜಿಂದಾಲ್ ಏರ್ಸ್ಟ್ರಿಪ್ ನಿಂದ ವಿಶೇಷ ವಿಮಾನ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *