ತುಮಕೂರು: ಪ್ರಸಕ್ತ ಸಾಲಿನಲ್ಲಿ ರಾಜ್ಯದ 1,426 ಕಿ. ಮೀ. ರೈಲು ಮಾರ್ಗದಲ್ಲಿ ಸ್ವಯಂ ಚಾಲಿತ ಸಿಗ್ನಲ್ ಅಳವಡಿಸಲಾಗುವುದು ಈಗಾಗಲೇ 127 ಕಿ.ಮೀ ಪೂರ್ಣಗೊಂಡಿದೆ ಎಂದು ಕೇಂದ್ರ ಜಲ ಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.
ನಗರದಲ್ಲಿ ರೈಲ್ವೆ ಪ್ರಯಾಣಿಕರ ವೇದಿಕೆಯಿಂದ ಹಮ್ಮಿಕೊಂಡಿದ್ದ ದಶಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ದೇಶದಲ್ಲಿ 12 ಲಕ್ಷ ರೈಲ್ವೆ ನೌಕರರು ಕೆಲಸ ಮಾಡುತ್ತಿದ್ದಾರೆ. ಪ್ರಪಂಚದ ಸಾರಿಗೆ ವ್ಯವಸ್ಥೆಯಲ್ಲಿ ಭಾರತದ ರೈಲ್ವೆ 4ನೇ ಸ್ಥಾನದಲ್ಲಿದ್ದು, ಇದನ್ನು 2ನೇ ಸ್ಥಾನಕ್ಕೆ ತರಬೇಕು ಎಂಬುವುದು ಪ್ರಧಾನಿ ಮೋದಿಯವರ ಕನಸಾಗಿದೆ. ಇದಕ್ಕಾಗಿ ಹಲವಾರು ಅಭಿವೃದ್ಧಿ ಯೋಜನೆ ಜಾರಿಗೊಳಿಸಲಾಗುತ್ತಿದೆ. ಅಗತ್ಯ ಕೆಲಸಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಇನ್ನು 10 ವರ್ಷ ನರೇಂದ್ರ ಮೋದಿ ಪ್ರಧಾನಮಂತ್ರಿಯಾಗಿ ಮುಂದುವರಿಯುತ್ತಾರೆ. ಮುಂದಿನ ನಾಲ್ಕೈದು ತಿಂಗಳಲ್ಲಿ ಮೋದಿಯವರು ಜಿಲ್ಲೆಗೆ ಒಂದು ದೊಡ್ಡ ಯೋಜನೆ ಘೋಷಿಸಲಿದ್ದಾರೆ. ನಿರೀಕ್ಷೆಗೂ ಮೀರಿ ನಗರದ ರೈಲು ನಿಲ್ದಾಣ ಅಭಿವೃದ್ಧಿ ಮಾಡಲಾಗುತ್ತಿದೆ ತುಮಕೂರು ಇನ್ನೊಂದು ಬೆಂಗಳೂರು ಆಗಿ ಪರಿವರ್ತನೆ ಆಗುವ ಕಾಲ ದೂರವಿಲ್ಲ ಅವಶ್ಯಕತೆ ಇದ್ದರೆ ಮತ್ತೊಂದು ಮೆಮು ರೈಲು ಬಿಡಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.
ಸಂಘದ ಪದಾಧಿಕಾರಿಗಳು ಸರ್ಕಾರದ ಜತೆ ಕೈ ಜೋಡಿಸಿ ಕೆಲಸ ಮಾಡಬೇಕು. ಜನ ಸಾಮಾನ್ಯರಿಗೆ ಸರ್ಕಾರದ ಸೌಲಭ್ಯ ಸಿಗುವಂತೆ ನೋಡಿಕೊಳ್ಳಬೇಕು ಎಲ್ಲರು ಪಾರದರ್ಶಕವಾಗಿರಬೇಕು ಸಂಘದ ಜತೆ ನಾವು ಸದಾ ಇರುತ್ತೇವೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

