Breaking News

ರೆಡ್ಡಿ ಸಹಕಾರ ಬ್ಯಾಂಕಿನ ಶತಮಾನೋತ್ಸವ ಸಮಾರಂಭದಲ್ಲಿ ಸಿಎಂ ಭಾಗಿ

ಧಾರವಾಡ: ಡಾ.ಡಿ.ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ಭಾನುವಾರ ರೆಡ್ಡಿ ಸಹಕಾರ ಬ್ಯಾಂಕಿನ ಶತಮಾನೋತ್ಸವ ಸಮಾರಂಭ ಜರುಗಿತು.

ಈ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಸಚಿವರಾದ ರಾಮಲಿಂಗಾ ರೆಡ್ಡಿ, ಆರ್.ಬಿ.ತಿಮ್ಮಾಪುರ, ಎಚ್‌.ಕೆ.ಪಾಟೀಲ, ಸಭಾಪತಿ ಬಸವರಾಜ ಹೊರಟ್ಟಿ, ಶಾಸಕರಾದ ಎನ್‌.ಎಚ್.ಕೋನರಡ್ಡಿ, ಪ್ರಕಾಶ ಕೋಳಿವಾಡ, ಪ್ರಸಾದ್‌ ಅಬ್ಬಯ್ಯ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು ಯಾವತ್ತೂ ಸಹಕಾರಿ ಕ್ಷೇತ್ರದಲ್ಲಿ ಕೆಲಸ ಮಾಡಿಲ್ಲ. ನನಗೆ ಸಹಕಾರಿ ಕ್ಷೇತ್ರದಲ್ಲಿ ಜ್ಞಾನ ಕಡಿಮೆ. ಇಂತಹ ಬ್ಯಾಂಕ್‌ಗಳು ಚೆನ್ನಾಗಿ ನಡೆದಾಗಲೇ ಶತಮಾನೋತ್ಸವ ಆಗುತ್ತದೆ. ಯಾವುದೇ ಬ್ಯಾಂಕ್ ಲಾಭದಾಯಕವಾಗಿ ನಡೆಯಲು ಅಲ್ಲಿನ ಆಡಳಿತ ಪ್ರಾಮಾಣಿಕವಾಗಿ ಇರಬೇಕು. ಅಲ್ಲಿ ಹೆಗ್ಗಣಗಳು ಸೇರಿಕೊಂಡರೆ ಬಹಳ ಕಷ್ಟ ಎಂದರು.

1905ರಲ್ಲೇ ನಮ್ಮ ರಾಜ್ಯದಲ್ಲಿ ಸಹಕಾರ ಕ್ಷೇತ್ರ ಆರಂಭವಾಯಿತು. ಏಷ್ಯದಲ್ಲೇ ಮೊದಲು ಸಹಕಾರ ಕ್ಷೇತ್ರ ಕರ್ನಾಟಕದಲ್ಲಿ ಆರಂಭವಾಯ್ತು ಎಂದು ಸಿದ್ದರಾಮಯ್ಯ ಹೇಳಿದರು.

Share News

About Shaikh BigTv

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *