Breaking News

ಖರ್ಗೆ ಕುಟುಂಬಕ್ಕೆ ಸೇರಿದ ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂಮಿ ವಾಪಸ್: ಪರಮೇಶ್ವರ ಅಚ್ಚರಿ ಹೇಳಿಕೆ

ಬೆಂಗಳೂರು: ಮುಡಾ ಹಗರಣ ಆರೋಪ ತೀವ್ರಗೊಂಡ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ 14 ನಿವೇಶನಗಳನ್ನು ವಾಪಸ್ ನೀಡಿದ್ದರು. ಅದರ ಬೆನ್ನಲ್ಲೇ ಕೆಐಎಡಿಬಿ ಭೂಮಿ ಹಂಚಿಕೆಯಲ್ಲಿಯೂ ಅಕ್ರಮದ ಆರೋಪ ಕೇಳಿಬಂದಿತ್ತು ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಸೇರಿದ ಸಿದ್ದಾರ್ಥ ವಿಹಾರ ಟ್ರಸ್ಟ್ ಭೂಮಿ ವಾಪಸ್ ಮಾಡಿದ್ದು, ಪರಮೇಶ್ವರ್‌ ಅವರು ಅಚ್ಚರಿ ಹೇಳಿಕೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿನ ಮಾಧ್ಯಮಗಳ ಜೊತೆಗೆ ಮಾತನಾಡಿ, ತಪ್ಪು ಮಾಡಿದ್ದಾರೆ ಅನ್ನೋ ಕಾರಣಕ್ಕೆ ಭೂಮಿ ವಾಪಸ್ ನೀಡಿಲ್ಲ ಎಂದಿದ್ದಾರೆ. ಭೂಮಿ ಹಂಚಿಕೆಯಾಗಿದ್ದಕ್ಕೆ ಸಾಕಷ್ಟು ಆರೋಪಗಳು ಕೇಳಿ ಬಂದಿದ್ದವು ಸುಮ್ಮನೆ ಏಕೆ ಗೊಂದಲ ಎಂದು ಭೂಮಿ ವಾಪಸ್ ಕೊಟ್ಟಿದ್ದಾರೆ. ಯಾವುದೇ ಕಾನೂನು ಉಲ್ಲಂಘನೆ ಮಾಡದೆ ನಿವೇಶನ‌ ತೆಗೆದುಕೊಂಡಿದ್ದೇವೆ ಆಪಾದನೆ ಮಾಡುತ್ತಿರುವುದರಿಂದ ಬೇಡ ಎಂದು ನಿವೇಶ ವಾಪಸ್ ನೀಡಿದ್ದಾರೆ. ಕಾಮಾಲೆ ಕಣ್ಣಿಗೆ ಕಾಣಿಸುವುದೆಲ್ಲ ಹಳದಿ ಎಂಬಂತೆ, ಬಿಜೆಪಿಯವರು ಕಾಮಾಲೆ ಕಣ್ಣಿನಿಂದ ಎಲ್ಲವನ್ನು ನೋಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು‌.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *