Breaking News

ಸಂಡೂರಿನ ನಾರಿಹಳ್ಳ ಜಲಾಶಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ

ಬಳ್ಳಾರಿ: ಸಂಡೂರಿನಲ್ಲಿರುವ ನಾರಿಹಳ್ಳ ಕಿರು ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸುವ ಹಿನ್ನೆಲೆಯಲ್ಲಿ ಕಿರು ಜಲಾಶಯ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. 0.810 ಟಿಎಂಸಿ ಸಂಗ್ರಹಣಾ ಸಾಮರ್ಥ್ಯ ಹೊಂದಿರುವ ಜಲಾಶಯವನ್ನು 1972 ರಲ್ಲಿ‌ ಲೋಕಾರ್ಪಣೆ ಮಾಡಲಾಗಿತ್ತು.
ಆಗಿನ ಸಿಎಂ ದೇವರಾಜು ಅರಸು ಅವರು ಜಲಾಶಯವನ್ನು ಉದ್ಘಾಟಿಸಿದ್ದರು. 615 ಕಿಮೀ ವಿಸ್ತೀರ್ಣ ಹೊಂದಿರುವ ಕಿರು ಜಲಾಶಯ ಸಂಡೂರು ಪಟ್ಟಣ ಸೇರಿ ವಿವಿಧ ಗ್ರಾಮಗಳ ಕುಡಿಯುವ ನೀರಿಗೆ ಆಧಾರವಾಗಿದೆ ಇದು ಐದು ಕ್ರಸ್ಟ್‌ ಗೇಟ್‌ಗಳನ್ನ ಹೊಂದಿದೆ.
ಮದುವಣಗಿತ್ತಿಯಂತೆ ಸಿಂಗಾರಗೊಂಡಿರುವ ಕಿರು ಜಲಾಶಯಕ್ಕೆ ನೂರಾರು ಸಂಖ್ಯೆಯಲ್ಲಿ ಜನ ಆಗಮಿಸುತ್ತಿದ್ದಯ, ಸಿಎಂ ಆಗಮಿಸುವ ಹಿನ್ನೆಲೆಯಲ್ಲಿ ಯಾರನ್ನು ಬಿಡುತ್ತಿಲ್ಲ. ಇನ್ನು ನಿತ್ಯ ಜಲಾಶಯದ ಬಳಿ ನೂರಾರು ಸಂಖ್ಯೆಯಲ್ಲಿ ಕೋತಿಗಳಿ ಜಮಾಯಿಸುತ್ತವೆ. ಇವತ್ತು ಕೂಡ ಕೋತಿಗಳು ಜಮಾವಣೆಗೊಂಡಿವೆ. ಪೆಂಡಾಲ್, ಬಾಗೀನ ಅರ್ಪಣೆ ಸಾಮಗ್ರಿಗಳನ್ನು ದಕ್ಕೆ ಮಾಡುತ್ತವೆ ಎನ್ನುವ ಕಾರಣಕ್ಕೆ ಪಟಾಕಿ ಸಿಡಿಸಿ ಕೋತಿಗಳನ್ನು ಓಡಿಸುತ್ತಿರುವುದು ಕಂಡು ಬಂದಿತು.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *