ಹುಬ್ಬಳ್ಳಿ : ಹಳೇಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಕಠಿಣ ಕಾನೂನುಗಳನ್ನು ಹಾಕಲಾಗಿತ್ತು. ಕಡಿಮೆ ಸಮಯದಲ್ಲಿ ಸಾವಿರಾರು ಜನ ಸೇರಿ ಗಲಭೆ ಮಾಡಿದ್ದರು. ಆಗಿನ ಕಮಿಷನರ್ ಲಾಬೂರಾಮ್ ಅವರು ಸ್ಥಳಕ್ಕೆ ದೌಡಾಯಿಸಿ ನಿಯಂತ್ರಣ ಮಾಡಿ, ಅನಾಹುತ ತಪ್ಪಿಸಿದ್ದಾರೆ. ಇದೊಂದು ಪೂರ್ವ ನಿಯೋಜಿತ ಕೃತ್ಯವಾಗಿದೆ. ಇದೀಗ ಕಾಂಗ್ರೆಸ್ ಪಕ್ಷ ಗಲಭೆ ಪ್ರಕರಣವನ್ನು ವಾಪಾಸ್ ಪಡೆದು ಸಂವಿಧಾನಕ್ಕೆ ಅಗೌರವ ಕೊಡುತ್ತಿದೆ. ಮತಬ್ಯಾಂಕ್ ಗೆ ಸಮಾಜದ ವ್ಯವಸ್ಥೆ ಹಾಳು ಮಾಡುತ್ತಿದೆಂದು ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಹರಿಹಾಯ್ದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರದ ನಿರ್ಧಾರಗಳು ಮುಂದೆ ಕಾನೂನು ಸುವ್ಯವಸ್ಥೆ ಹದಗೆಡಲು ಕಾರಣವಾಗುತ್ತದೆ. ಜಾತಿಗಳ ನಡುವೆ ಹೋರಾಟ ನಡೆಯಲು ಕಾರಣವಾಗುತ್ತದೆ. ಈ ನಿರ್ಧಾರವನ್ನು ಕಾಂಗ್ರೆಸ್ ಕೈಬಿಡಬೇಕು ಎಂದು ಆಗ್ರಹಿಸಿದರು.
ಹಳೇಹುಬ್ಬಳ್ಳಿ ಗಲಭೆ ಪ್ರಕರಣವನ್ನು ವಾಪಾಸ್ ಪಡೆಯಲು ಸಾಧ್ಯವೇಯಿಲ್ಲ. ಆದರೆ ಕಾಂಗ್ರೆಸ್ ಕಾನೂನು ಬಾಹಿರವಾಗಿ ಪ್ರಕರಣವನ್ನು ವಾಪಾಸ್ ಪಡೆಯುವ ಕೆಲಸ ಮಾಡಿದೆ ಎಂದರು. ಈ ಪ್ರಕರಣವನ್ನು ಕೋರ್ಟ್ ವಜಾ ಮಾಡಲು ನಿರ್ಧಾರ ಮಾಡಬೇಕು. ಆದರೆ ಕಾಂಗ್ರೆಸ್ ಸುಖಾಸುಮ್ಮನೆ ಅಲ್ಪಸಂಖ್ಯಾತರ ಕಣ್ಣು ಒರೆಸುವ ಕೆಲಸ ಮಾಡುತ್ತಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news

