ಧಾರವಾಡ: ರಾಷ್ಟ್ರೀಯ ಅಂಗವಿಕಲರ ಗ್ರಾಮೀಣ ಪುನರ್ವಸತಿ ಯೋಜನೆ ಅಡಿಯಲ್ಲಿ ಧಾರವಾಡ ತಾಲೂಕಿನ ನರೇಂದ್ರ ಗ್ರಾಮ ಪಂಚಾಯತ ಹಾಗೂ ಅಳ್ನಾವರ ತಾಲೂಕಿನ ಅರವಟಗಿ ಗ್ರಾಮ ಪಂಚಾಯತಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಯಲ್ಲಿ ವೈಯಕ್ತಿಕ ವಿವರಗಳನ್ನು ಬರೆದು ಆಯಾ ತಾಲೂಕಿನ ತಾಲೂಕಾ ಪಂಚಾಯತಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರು (ಎಂಆರ್‍ಡಬ್ಲ್ಯೂ) ಇವರಿಗೆ ಅಕ್ಟೋಬರ್ 25, 2024 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0836-2744474 ಗೆ ಅಥವಾ ತಾಲೂಕಾ ಪಂಚಾಯತಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರನ್ನು (ಎಂ.ಆರ್.ಡಬ್ಲ್ಯೂ) ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

