Breaking News

ಅ. 23 ರಂದು ಕಿತ್ತೂರ ರಾಣಿ ಚನ್ನಮ್ಮ ಜಯಂತಿ ಆಚರಣೆ

ಧಾರವಾಡ : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಅಕ್ಟೋಬರ 23 ರಂದು ಮಧ್ಯಾಹ್ನ 12 ಗಂಟೆಗೆ ಕಿತ್ತೂರ ರಾಣಿ ಚನ್ನಮ್ಮ ಜಯಂತಿಯನ್ನು ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಹೇಳಿದರು.

ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಜರುಗಿದ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಯಂತಿ ಕಾರ್ಯಕ್ರಮವನ್ನು ನಾವೆಲ್ಲರೂ ವಿಜೃಂಭಣೆಯಿಂದ ಆಚರಿಸೋಣ ಎಂದು ತಿಳಿಸಿದರು.
ಅಕ್ಟೋಬರ್ 16 ರಂದು ಕಿತ್ತೂರು ರಾಣಿ ಚನ್ನಮ್ಮ ವಿಜಯ ಜ್ಯೋತಿ ಯಾತ್ರಾ ರಥವು ಬೆಳಿಗ್ಗೆ 11 ಗಂಟೆಗೆ ಜಿಲ್ಲೆಗೆ ಆಗಮಿಸಲಿದೆ. ಜಿಲ್ಲಾಧಿಕಾರಿ ಕಚೇರಿ ಎದುರು ರಥಕ್ಕೆ ಪೂಜೆ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ಮಹಾನಗರ ಪಾಲಿಕೆ ಸದಸ್ಯ ಶಂಭು ಸಾಲಿಮನಿ, ಸಮಾಜದ ಮುಖಂಡರಾದ ನಿಂಗಣ್ಣ ಕರಿಕಟ್ಟಿ, ನಿಂಗನಗೌಡ ಪಾಟೀಲ, ಮಡಿವಾಳಪ್ಪ ಸರಿಯಣ್ಣನವರ, ಎಸ್.ಜಿ. ಪಾಟೀಲ ಸೇರಿದಂತೆ ಮುಖಂಡರು, ಹಿರಿಯರು, ಸಾರ್ವಜನಿಕರು ಸಭೆಯಲ್ಲಿ ಉಪಸ್ಥಿತರಿದ್ದರು.

Share News

About Shaikh BigTv

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *