Breaking News

ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತು ಅ.21 ರಂದು ಸಚಿವ ಪರಮೇಶ್ವರ ನೇತೃತ್ವದಲ್ಲಿ ಸಭೆ

ಬೆಂಗಳೂರು: ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತು ಗೃಹ ಸಚಿವ ಪರಮೇಶ್ವರ್ ನೇತೃತ್ವದಲ್ಲಿ ಅಕ್ಟೋಬರ್ 21ರಂದು ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ.
ಪರಮೇಶ್ವರ್ ಅವರು ದಲಿತ ಮುಖಂಡರಾಗಿದ್ದು, ಅ. 21 ರಂದು ವಿಧಾನಸೌಧದಲ್ಲಿ ಎಸ್‌ಸಿ ಸಮುದಾಯದ ಶಾಸಕರ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ, ಆರ್ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ, ವಿಧಾನಸಭೆ ಉಪಸಭಾಪತಿ ರುದ್ರಪ್ಪ ಎಂ.ಲಮಾಣಿ ಸೇರಿದಂತೆ ಇತರರು ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಈಗಾಗಲೇ ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ನೇತೃತ್ವದ ಸಮಿತಿ, ಎಂಎಲ್‌ಸಿ ಸುಧಾಮದಾಸ್ ಸೇರಿದಂತೆ ಸದಸ್ಯರನ್ನೊಳಗೊಂಡ ಸಮಿತಿಯು ಮೀಸಲಾತಿ ವರ್ಗೀಕರಣದ ಕುರಿತು ಹಲವು ಸುತ್ತಿನ ಚರ್ಚೆ ನಡೆಸಿದೆ.
ಇನ್ನು ಎಸ್‌ಸಿ ವರ್ಗದ ಎಲ್ಲಾ ನಾಯಕರು ಒಳಮೀಸಲಾತಿಗೆ ಒಪ್ಪಿಗೆ ನೀಡಿದ್ದಾರೆ. ಆದರೆ, ವೈಜ್ಞಾನಿಕ ರೀತಿಯಲ್ಲಿರಬೇಕು ಎಂದು ಒತ್ತಾಯಿಸಿದ್ದಾರೆ. ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಾಸಕರೊಬ್ಬರು ಹೇಳಿದ್ದಾರೆ.
ಈ ನಡುವೆ ಸುಪ್ರೀಂ ಕೋರ್ಟ್ ಆದೇಶದ ಹೊರತಾಗಿಯೂ ಸರ್ಕಾರವು ಮೀಸಲಾತಿ ವರ್ಗೀಕರಣವನ್ನು ಜಾರಿಗೊಳಿಸಲು ವಿಳಂಬ ನೀತಿ ಅನುಸರಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಪರಿಶಿಷ್ಟ ಜಾತಿ ಸಮುದಾಯದ ಮುಖಂಡರ ಗುಂಪು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

Share News

About BigTv News

Check Also

ಅಯ್ಯೋ ಪಾಪ ಅಂದಿದ್ದೇ ತಪ್ಪಾಯ್ತು: ಎಂಬಿಬಿಎಸ್ ವಿದ್ಯಾರ್ಥಿನಿ ಸ್ನೇಹಿತೆಯ ಸೋಗಿನಲ್ಲಿ ಒಂದು ಲಕ್ಷ ರೂ. ವಂಚನೆ!

ವಿದೇಶದಲ್ಲಿ ಎಂಬಿಬಿಎಸ್‌ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯ ಕಾಲೇಜು ಶುಲ್ಕ ಪಾವತಿಸುವ ತುರ್ತು ಪರಿಸ್ಥಿತಿಯನ್ನು ಬಳಸಿಕೊಂಡು ಸೈಬರ್ ವಂಚಕರು ಬೆಂಗಳೂರಿನ ಕುಟುಂಬವೊಂದಕ್ಕೆ …

Leave a Reply

Your email address will not be published. Required fields are marked *